ನವದೆಹಲಿ: ಉತ್ತರಾಖಂಡ್ ನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಹೇರಿರುವುದನ್ನು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಸಿಪಿಐ-ಎಂ ಹೇಳಿದೆ.
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ ನಂತರ ಉತ್ತರಾಖಂಡ್ ನಲ್ಲೂ ರಾಷ್ಟ್ರಪತಿ ಆಡಳಿತ ಹೇರಿರುವ ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುತ್ತೇವೆ ಎಂಬುದನ್ನು ತೋರಿಸಿದೆ ಎಂದು ಸಿಪಿಐ ಎಂ ನ ಪತ್ರಿಕೆ ಪೀಪಲ್ಸ್ ಡೆಮಾಕ್ರಸಿಯ ಸಂಪಾದಕೀಯದಲ್ಲಿ ಬರೆದಿದೆ.
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಸಂವಿಧಾನದ ಆರ್ಟಿಕಲ್ 356 ನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ತಾನು ನೇಮಕ ರಾಜ್ಯಪಾರುಗಳಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ವರದಿ ತರಿಸಿಕೊಂಡು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು 356 ನೇ ವಿಧಿಯನ್ನು ರದ್ದುಗೊಳಿಸಬೇಕು ಎಂದು ಸಂಪಾದಕೀಯದ ಮೂಲಕ ಸಿಪಿಐ-ಎಂ ಆಗ್ರಹಿಸಿದೆ.