ಬೆಂಗಳೂರು: ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಮಂಡಳಿ ಎದುರು ಶುಕ್ರವಾರ ಪ್ರತಿಭಟನೆ ನಡೆಸುತ್ತಿದೆ.
ಮರು ಪರೀಕ್ಷೆಯನ್ನು ರದ್ದು ಮಾಡುವಂತೆ ಆಗ್ರಹಿಸಿರುವ ಎಬಿವಿಪಿ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಮಂಡಳಿ ವಿರುದ್ಧ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸುತ್ತಿದೆ.
ಇನ್ನು ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಈಗಾಗಲೇ ಕೆಲವು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಸಾಕಷ್ಟು ಕೋಪವನ್ನುಂಟು ಮಾಡಿದೆ. ಪರೀಕ್ಷೆಗಾಗಿ ಸಾಕಷ್ಟು ಶ್ರಮ ಪಟ್ಟಿದ್ದೆವು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಎರಡನೇ ಬಾರಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರ ವಿರುದ್ಧ ಕ್ರಮಕೊಗೊಂಡಿದ್ದ ರಾಜ್ಯ ಸರ್ಕಾರ ನಿನ್ನೆಯಷ್ಟೇ 40 ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಅಲ್ಲದೆ, ಮರು ಪರೀಕ್ಷೆಯನ್ನು ಏಪ್ರಿಲ್ 12ರಂದು ನಡೆಸಲು ತೀರ್ಮಾನಿಸಿದೆ.