ಕನ್ಹಯ್ಯ ಕುಮಾರ್, ಉಮರ್ ಖಾಲಿದ್ 
ದೇಶ

ಭದ್ರತೆ ಒದಗಿಸಿ ಎಂದು ದೆಹಲಿ ಪೊಲೀಸರಿಗೆ ಕನ್ಹಯ್ಯ ಕುಮಾರ್, ಖಾಲಿದ್ ಮನವಿ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಅವರ ಕಾಲೇಜ್...

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಅವರ ಕಾಲೇಜ್ ಸಹೋದ್ಯೋಗಿ ಉಮರ್ ಖಾಲಿದ್ ತಮಗೆ ಭದ್ರತೆ ಒದಗಿಸುವಂತೆ ದೆಹಲಿ ಪೊಲೀಸರಿಗೆ ಮನವಿ ಮಾಡಿರುವುದಾಗಿ ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ.
ಕನ್ಹಯ್ಯ ಹಾಗೂ ಖಾಲಿದ್ ಭದ್ರತೆ ಒದಗಿಸುವಂತೆ ದೆಹಲಿ ಪೊಲೀಸರಿಗೆ ಮನವಿ ಮಾಡಿರುವುದಾಗಿ ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.
ಕನ್ಹಯ್ಯ ಕುಮಾರ್ ಅವರು ಇತ್ತೀಚಿಗಷ್ಟೇ 1984 ಸಿಖ್ ದಂಗೆಗೆ ಸಂಬಂಧಿಸಿದಂತೆ ಹೊಸ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದರು. ಸಿಖ್ ದಂಗೆಗೂ 2002ರ ಗುಜರಾತ್ ಗಲಭೆಗೂ ಬಹಳ ವ್ಯತ್ಯಾಸವಿದೆ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಆದರೆ ನಂತರ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದರು.
ಕನ್ಹಯ್ಯ ಕುಮಾರ್ ಅವರು, ಸಿಖ್ ಗಲಭೆ ಒಂದು ಸಾಮೂಹಿಕ ದಂಗೆ. ಆದರೆ ಗುಜರಾತ್ ಗಲಭೆ ರಾಜ್ಯ ಸರ್ಕಾರದ ಪ್ರಾಯೋಜಿತ ಹಿಂಸಾಚಾರ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video