ಪಠಾಣ್ ಕೋಟ್ ತನಿಖೆಗೆ ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ಎನ್ಐಎ ತನಿಖಾ ತಂಡ
ಪಠಾಣ್ ಕೋಟ್ ವಾಯು ನೆಲೆ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಲು ಭಾರತದ ತನಿಖಾ ತಂಡವೊಂದು ಪಾಕಿಸ್ತಾನಕ್ಕೆ ಭೇಟಿ ನೀದಲಿದೆ ಎಂದು ಎನ್ ಐಎ ತಿಳಿಸಿದೆ.
ನವದೆಹಲಿ: ಪಠಾಣ್ ಕೋಟ್ ವಾಯು ನೆಲೆ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಲು ಭಾರತದ ತನಿಖಾ ತಂಡವೊಂದು ಪಾಕಿಸ್ತಾನಕ್ಕೆ ಭೇಟಿ ನೀದಲಿದೆ ಎಂದು ಎನ್ ಐಎ ತಿಳಿಸಿದೆ.
ಪಾಕಿಸ್ತಾನಕ್ಕೆ ತನಿಖಾ ತಂಡವೊಂದನ್ನು ಕಳಿಸುವ ಪ್ರಸ್ತಾವನೆಗೆ ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಎನ್ಐಎ ಪ್ರಧಾನ ನಿರ್ದೇಶಕ ಶರದ್ ಕುಮಾರ್ ಹೇಳಿದ್ದಾರೆ. ಪಾಕಿಸ್ತಾನ ತನಿಖಾ ತಂಡ 13 ಸಾಕ್ಷಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದಾಳಿಯಲ್ಲಿ ಸೇನೆ ಹೊಡೆದುರುಳಿಸಿದ್ದ 4 ಉಗ್ರರ ಡಿಎನ್ಎ ವರದಿಗಳನ್ನು ಪಡೆದಿದೆ. ಇದೇ ವೇಳೆ ಭಾರತವೂ ಪಾಕಿಸ್ತಾನಕ್ಕೆ ತನಿಖಾ ತಂಡವನ್ನು ಕಳಿಸುವ ಪ್ರಸ್ತಾವನೆಗೆ ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.