ನವದೆಹಲಿ: ಇಂದು 109ನೇ ವಸಂತಕ್ಕೆ ಕಾಲಿಟ್ಟ ಸಿದ್ದಗಂಗಾ ಮಠಾಧೀಶರಾದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನ್ಮ ದಿನದ ಶುಭ ಕೋರಿದ್ದಾರೆ.
ಇಂದು ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ನಡೆದಾಡುವ ದೇವರು ಎಂದೇ ಖ್ಯಾತಿ ಹೊಂದಿರುವ ಪದ್ಮವಿಭೂಷಣ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಶಿವಕುಮಾರ ಸ್ವಾಮೀಜಿಗಳ ಸೇವೆ ಮತ್ತು ಶ್ರೇಷ್ಠ ಕೆಲಸ ಅನೇಕ ಜೀವಗಳ ರಕ್ಷಣೆಗೆ ಕಾರಣವಾಗಿದೆ ಎಂದು ಶ್ಲಾಘಿಸಿದ್ದಾರೆ.