ದೇಶ

ಉತ್ತರಾಖಂಡ್ ಖರ್ಚು, ವೆಚ್ಚದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ

Lingaraj Badiger
ನವದೆಹಲಿ: ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿರುವ ಉತ್ತರಾಖಂಡ್ ದಲ್ಲಿ ಏಪ್ರಿಲ್ 1 ನಂತರದ ಖರ್ಚು, ವೆಚ್ಚಗಳ ಧನ ವಿನಿಯೋಗಕ್ಕೆ ಅವಕಾಶ ಮಾಡಿಕೊಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸುಗ್ರೀವಾಜ್ಞೆಗೆ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1ರ ನಂತರದ ವೆಚ್ಚಗಳಿಗೆ ಧನ ವಿನಿಯೋಗ ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿತ್ತು.
SCROLL FOR NEXT