ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ: ಕೇಜ್ರಿವಾಲ್

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ಅರುಣಾಚಲ ಪ್ರದೇಶ ಉತ್ತರಾಖಂಡ್ ನಲ್ಲಿ  ರಾಷ್ಟ್ರಪತಿ ಆಡಳಿತ ಜಾರಿ ಮಾಡಿರುವುದರ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಎರಡು ರಾಜ್ಯಗಳಲ್ಲಾದಂತೆ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.  
ಆಡಳಿತ ಪಕ್ಷದ ಶಾಸಕರ ಮಾತನ್ನು ಆಲಿಸಲು ಪ್ರತಿಪಕ್ಷಗಳಿಗೆ ಮನವಿ ಮಾಡಿರುವ ಕೇಜ್ರಿವಾಲ್, ವಿಪಕ್ಷ ಸದಸ್ಯರು ಜನಾದೇಶಕ್ಕೆ ಗೌರವ ನೀಡಬೇಕೆಂದು ಹೇಳಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತda ಬಗ್ಗೆ ಮಾತನಾಡಿದ ಕೇಜ್ರಿವಾಲ್, " ಪ್ರತಿಪಕ್ಷಗಳು ದೆಹಲಿ ಜನತೆ ನೀಡಿರುವ ಆದೇಶವನ್ನು ಗೌರವಿಸಬೇಕು, ಅರುಣಾಚಲ ಪ್ರದೇಶ ಉತ್ತರಾಖಂಡ್ ನಲ್ಲಾದಂತೆ ದೆಹಲಿಯಲ್ಲಿ  ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಡುವುದಿಲ್ಲ ಎಂದಿದ್ದಾರೆ.
ರಾಷ್ಟ್ರಪತಿ ಆಡಳಿತ ಜಾರಿಗೆ ತಂದಿರುವುದನ್ನು ಖಂಡಿಸಿದ್ದ ಕೇಜ್ರಿವಾಲ್, ಕೇಂದ್ರ ಸರ್ಕಾರ ದೆಹಲಿಯಲ್ಲೂ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಯತ್ನಿಸುತ್ತದೆ ಎಂದು ಆರೋಪಿಸಿದ್ದರು. ಮುಂದಿನ ಎರಡು ವರ್ಷಗಳಲ್ಲಿ ಒಂದೇ ಒಂದು ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಅರ್ಥವಾಗಿದೆ, ಆದ್ದರಿಂದ ಗೂಂಡಾಗಿರಿ ನಡೆಸುತ್ತಿದ್ದು, ಹಿಮಾಚಲ ಪ್ರದೇಶ, ದೆಹಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಯತ್ನಿಸುತ್ತದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!