ನೈನಿಟಾಲ್ ಸುತ್ತಮುತ್ತಲ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು (ಸಂಗ್ರಹ ಚಿತ್ರ) 
ದೇಶ

ನಿಜವಾಯ್ತೇ ಸಂಶಯ, ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡ?

ಉತ್ತರಾಖಂಡದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡವಿರುವ ಕುರಿತು ಮಾಹಿತಿ ಲಭ್ಯವಾಗಿದ್ದು ಪ್ರಕರಣ ಸಂಬಂಧ ಇದೀಗ ಇದೇ ಮೊದಲ ಬಾರಿಗೆ ನಾಲ್ಕು ಮಂದಿಯನ್ನು...

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿರುವ ಭೀಕರ ಕಾಡ್ಗಿಚ್ಚಿನ ಹಿಂದೆ ಕಾಣದ ಕೈಗಳ ಕೈವಾಡವಿರುವ ಕುರಿತು ಮಾಹಿತಿ ಲಭ್ಯವಾಗಿದ್ದು ಪ್ರಕರಣ ಸಂಬಂಧ ಇದೀಗ ಇದೇ ಮೊದಲ  ಬಾರಿಗೆ ನಾಲ್ಕು ಮಂದಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಉತ್ತರಾಖಂಡ ಕಾಡ್ಗಿಚ್ಚು ಪ್ರಕರಣ ಸಂಬಂಧ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಕಾಡ್ಗಿಚ್ಚು ಸಹಜವಾದುದಲ್ಲ, ಅದು ಮಾನವ ಕೃತ್ಯ ಎಂದು ಹೇಳಿದ್ದಾರೆ. ಅಲ್ಲದೆ .  ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಸಚಿವರು, ಉತ್ತರಾಖಂಡದಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚನ್ನು ಆರಿಸಲು ಸುಮಾರು 10 ಸಾವಿರ ಮಂದಿ  ಶ್ರಮಪಡುತ್ತಿದ್ದು, ಸತತ 18 ದಿನಗಳ ಕಠಿಣ ಶ್ರಮದಿಂದ ಕಾಡ್ಗಿಚ್ಚು ಇದೀಗ ಒಂದು ಹಂತದಲ್ಲಿ ನಿಯಂತ್ರಣಕ್ಕೆ ತರಲಾಗಿದೆ. ಸದ್ಯ 6,000ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ  ತೊಡಗಿಸಿಕೊಂಡಿದ್ದಾರೆ. ಅರಣ್ಯ ಇಲಾಖೆ ಡಿಜಿ ಅವರ ಮುಂದಾಳತ್ವದಲ್ಲಿ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕೇಂದ್ರ ಸರ್ಕಾರ  ಒದಗಿಸಿದೆ ಎಂದು ಅವರು ಹೇಳಿದರು.

ಇದೇ ವೇಳೆ ಬಂಧಿತರ ಕುರಿತು ಮಾಹಿತಿ ನೀಡಲು ನಿರಾಕರಿಸಿದ ಅವರು ಪೊಲೀಸ್ ವಿಚಾರಣೆ ಬಳಿಕ ಸತ್ಯಾಸತ್ಯಕೆ ಹೊರಬೀಳುತ್ತದೆ ಎಂದು ಹೇಳಿದರು.

ಶೇ.70ರಷ್ಚು ನಿಯಂತ್ರಣವಾದ ಕಾಡ್ಗಿಚ್ಚು

ಇನ್ನು ರಭಸವಾಗಿ ವ್ಯಾಪಿಸುತ್ತಿದ್ದ ಕಾಡ್ಗಿಚ್ಚನ್ನು ಎನ್ ಡಿಆರ್ಎಫ್ ತಂಡದ ನೇತೃತ್ವದಲ್ಲಿ ಅರಣ್ಯ, ಅಗ್ನಿಶಾಮಕ ಸಿಬ್ಬಂದಿ ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 110ರಿಂದ 115 ಸಕ್ರಿಯ ಕಾಡ್ಗಿಚ್ಚನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 50-60 ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಕ್ರಿಯವಾಗಿದ್ದು, ಇದು ಬೇರೆ ಪ್ರದೇಶಕ್ಕೆ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎನ್ ಡಿಆರ್ ಎಫ್ ನಿರ್ದೇಶಕ ಒಪಿ ಸಿಂಗ್ ಅವರು ಹೇಳಿದ್ದಾರೆ.

ಇದೇ ವೇಳೆ ಎಂಐಜಿ 17 ಹೆಲಿಕಾಪ್ಟರ್ ಬೆಂಕಿ ನಂದಿಸುವ ತನ್ನ ಕಾರ್ಯವನ್ನು ಮುಂದುವರೆಸಿದ್ದು, ಬೆಂಕಿ ವ್ಯಾಪಕವಾಗಿರು ಸ್ಥಳಗಳಲ್ಲಿ ನೀರು ಹಾಯಿಸುವ ಮೂಲಕ ಕಾಡ್ಗಿಚ್ಚನ್ನು ತಹಬದಿಗೆ ತಂದಿದೆ ಎಂದು ತಿಳಿದುಬಂದಿದೆ. ಸುಮಾರು 130 ಸಿಬ್ಬಂದಿಗಳ ಒಂದೊಂದು ತಂಡ 8-10 ಕಿ.ಮೀ ವ್ಯಾಪ್ತಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ