ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಪ್ಟರ್ ಹಗರಣ: ಸಿಬಿಐನಿಂದ ಮಾಜಿ ವಾಯು ಸೇನಾ ಮುಖಸ್ಥ ಎಸ್​ಪಿ ತ್ಯಾಗಿ ವಿಚಾರಣೆ

3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಸಂಬಂಧ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್​ಪಿ ತ್ಯಾಗಿ ಅವರನ್ನು ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿತು.

ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ (ಸಂಗ್ರಹ ಚಿತ್ರ)
Srinivasa Murthy VN
Updated On : 2 May 2016, 2:07 am

ನವದೆಹಲಿ: 3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಸಂಬಂಧ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತೀಯ ವಾಯುಪಡೆಯ  ಮಾಜಿ ಮುಖ್ಯಸ್ಥ ಎಸ್​ಪಿ ತ್ಯಾಗಿ ಅವರನ್ನು ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿತು.

ದೆಹಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಯಲ್ಲಿ ತ್ಯಾಗಿ ಅವರ ವಿಚಾರಣೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದಲೇ ತ್ಯಾಗಿ ಅವರನ್ನು ಹೆಲಿಕಾಪ್ಟರ್ ಖರೀದಿ ಪ್ರಕರಣ ಸಂಬಂಧ ಪ್ರಶ್ನೆಗಳನ್ನು  ಕೇಳಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಇಟಲಿಯ ಮಿಲಾನ್ ಕೋರ್ಟ್ ಆಫ್ ಅಪೀಲ್ಸ್ ನ ತೀರ್ಪಿನ ವಿವರ ನೀಡಿರುವ ಅಧಿಕಾರಿಗಳು ಆ ಬಗ್ಗೆಯೂ ತ್ಯಾಗಿ ಅವರನ್ನು ಪ್ರಶ್ನಿಸಿದ್ದಾರೆ.  ಹೆಲಿಕಾಪ್ಟರ್ ನಿರ್ಮಾಪಕ ಫಿನ್​ವೆುಕಾನಿಕಾ ಮತ್ತು ಅಗಸ್ಟಾ ವೆಸ್ಟ್​ಲ್ಯಾಂಡ್ ಕಂಪೆನಿಗಳು ಲಂಚವನ್ನು ಭಾರತೀಯ ಅಧಿಕಾರಿಗಳಿಗೆ ಐರೋಪ್ಯ ದಲ್ಲಾಳಿಗಳ ಮೂಲಕ ಹೇಗೆ ರವಾನೆ ಮಾಡಿತ್ತು  ಮತ್ತು ಈ ಮೂಲಕ ವ್ಯವಹಾರ ಕುದುರಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.  ಇನ್ನು ಇಟಲಿ ಕೋರ್ಟ್ ತನ್ನ ಆದೇಶದಲ್ಲಿ  ಹಲವಾರು ಸಂದರ್ಭಗಳಲ್ಲಿ ತ್ಯಾಗಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಈ ಬಗ್ಗೆಯೂ ಪ್ರಶ್ನೆ ಮಾಡಿದೆ.

ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್​ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ  ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್​ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ  ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement