ನವದೆಹಲಿ: ಇಂದಿರಾಗಾಂಧಿ ಅಂತರರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಅಗ್ಗವಾಗಿದೆ.
ಪ್ರಯಾಣಿಕರಿಂದ ಅಭಿವೃದ್ಧಿ ಶುಲ್ಕ ಪಡೆಯುವುದನ್ನು ಸ್ಥಗಿತಗೊಳಿಸಲು ನಿರ್ಧಾರ ಕೈಗೊಂಡಿರುವ ಹಿನ್ನಲೆಯಲ್ಲಿ ಭಾನುವಾರದಿಂದ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಅಗ್ಗವಾಗಿದೆ.
ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮೆಟೆಡ್ ಗೆ ದೇಶಿ ಮಾರ್ಗಗಳಲ್ಲಿ ಸಂಚರಿಸುವ ಪ್ರಯಾಣಿಕರಿಂದ ರು.100 ಮತ್ತು ವಿದೇಶ ಮಾರ್ಗಗಳಲ್ಲಿ ಸಂಚರಿಸುವವರಿಂದ ರು.600 ಅಭಿವೃದ್ಧಿ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇದೀಗ ಪ್ರಯಾಣಿಕರಿಂದ ಅಭಿವೃದ್ಧಿ ಶುಲ್ಕ ಪಡೆಯುವುದನ್ನು ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.