ಸಾಂದರ್ಭಿಕ ಚಿತ್ರ 
ದೇಶ

ಸೆಲ್ಫಿ ಸಾವುಗಳಿಗೆ ಭಾರತ ತವರು

ಸೆಲ್ಫಿ ತೆಗೆದುಕೊಳ್ಳುವ ಕ್ರೇಜ್ ಭಾರತದಲ್ಲಿ ಹೆಚ್ಚಾಗಿದ್ದು, ಇದಕ್ಕೆ ಬಲಿಯಾಗಿರುವವರ ಸಂಖ್ಯೆಯೂ ಭಾರತದಲ್ಲೇ ಹೆಚ್ಚು. ಭಾರತ...

ನವದೆಹಲಿ: ಸ್ಮಾರ್ಟ್ ಫೋನ್ ಗಳು ಬಂದ ನಂತರ ಸೆಲ್ಫಿ ಕ್ರೇಜ್ ಎಲ್ಲೆಡೆ ವ್ಯಾಪಿಸಿದ್ದು, ಸೆಲ್ಫಿ ಸಾವುಗಳಿಗೆ ಭಾರತ ತವರಾಗುತ್ತಿದೆ. 
2014 ನಂತರ ವಿಶ್ವದಾದ್ಯಂತ 49 ಸೆಲ್ಫಿ ಕ್ರೇಜ್ ಸಾವುಗಳು ವರದಿಯಾಗಿದ್ದು, ಆ ಪೈಕಿ 19 ಸಾವುಗಳು ಭಾರತದಲ್ಲೇ ಆಗಿವೆ.
ಇತ್ತಿಚೆಗಷ್ಟೇ ಸೆಲ್ಫಿ ತೆಗೆದುಕೊಳ್ಳವ ವೇಳೆ ತನ್ನ ಮೇಲೆ ತಾನೇ ಗುಂಡು ಹಾರಿಸಿಕೊಂಡು ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿರುವುದು ವರದಿಯಾಗಿತ್ತು. 
ರಾಮದೀಪ್ ಸಿಂಗ್(15) ಮೃತಪಟ್ಟ ದುರ್ದೈವಿ. ಬುಲೆಟ್ ಲೋಡೆಡ್ ಗನ್ ತೆಗೆದುಕೊಂಡು ಹಣೆಗೆ ಇಟ್ಟು ಸೆಲ್ಫಿ ತೆಗೆದುಕೊಳ್ಳುವ ವೇಳೆ ಆಕಸ್ಮಿಕವಾಗಿ ಟ್ರಿಗರನ್ನು ಒತ್ತಿದ ಪರಿಣಾಮ ಆತನ ಹಣೆಗೆ ಗುಂಡು ತಗುಲಿದೆ. ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತಲೆಗೆ ತೀವ್ರವಾದ ಗಾಯವಾಗಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿ ಭೂಷಣ್ ತಿಳಿಸಿದ್ದಾರೆ. 
ರಾಮ್ ದೀಪ್ ಅವರ ತಂದೆ ಕಟ್ಟಡ ಗುತ್ತಿಗೆದಾರಾಗಿದ್ದರು. ಅವರು ಬಳಸುತ್ತಿದ್ದ ಗನ್ ತೆಗೆದುಕೊಂಡು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಗುಂಡೇಟಿಗೆ ಬಲಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು