ಸಾಮೂಹಿಕ ಅತ್ಯಾಚಾರ 
ದೇಶ

ಕೇರಳ: ಕಾನೂನು ವಿದ್ಯಾರ್ಥಿನಿ ಆಯ್ತು, ಈಗ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್

ಕೇರಳದಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕಿಂತ ಅಮಾನುಷವಾಗಿ ಕಾನೂನು ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಘಟನೆ ಇನ್ನು ಹಸಿ ಇರುವಾಗಲೇ...

ಕೇರಳದಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕಿಂತ ಅಮಾನುಷವಾಗಿ ಕಾನೂನು ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಘಟನೆ ಇನ್ನು ಹಸಿ ಇರುವಾಗಲೇ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮಾಂದರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿದೆ.

ಕೇರಳದ ತಿರುವನಂತಪುರಂ ನಿವಾಸಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಕಾಮಾಂದರು ವರ್ಕಲಾ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಆಕೆಯಲ್ಲಿ ಅಪಹರಿಸಿ ಕೊಲ್ಲಂಗೆ ಕರೆದ್ಯೊಯ್ದು ಅತ್ಯಾಚಾರ ನಡೆಸಿದ್ದಾರೆ.

ಸಂತ್ರಸ್ತ ಯುವತಿ ಆಕೆ ಮೇಲೆ ಅತ್ಯಾಚಾರ ನಡೆಸಿದವರು 24 ವರ್ಷದ ಶ್ಯಾಜು ಮತ್ತು ಆತನ ಸ್ನೇಹಿತ 25 ವರ್ಷದ ಸುಜೀತ್ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.

ಆಟೋ ರಿಕ್ಷಾ ಚಾಲಕ ಶ್ಯಾಜು ಸಂತ್ರಸ್ತ ಯುವತಿಯ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಯುವತಿಯನ್ನು ವರ್ಕಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಆಕೆಯನ್ನು ಎಸ್ಯುಟಿ ಆಸ್ಪತ್ರೆಗೆ ಸೇರಿಸಲಾಗಿದೆ. ಯುವತಿ ಆರೋಪಿಗಳ ಸುಳಿವು ನೀಡಿದ್ದರಿಂದ ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದರು.

ಇನ್ನು ಆಟೋ ರಿಕ್ಷಾ ಚಾಲಕ ಸೇರಿ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಏಪ್ರಿಲ್ 28ರಂದು ಎರ್ನಾಕುಳಂ ಕಾನೂನು ಕಾಲೇಜು ವಿದ್ಯಾರ್ಥಿನಿ ಜಿಶಾಳ ಮೇಲೆ ಅತ್ಯಾಚಾರ ನಡೆಸಿ ಭರ್ಜರಿವಾಗಿ ಹತ್ಯೆ ಮಾಡಲಾಗಿತ್ತು. ಜಿಶಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ದೇಹದೊಳಗೆ ಹರಿತವಾದ ಕಬ್ಬಿಣದ ರಾಡ್ ಒಂದನ್ನು ತೂರಲಾಗಿದ್ದು, ಇದರಿಂದ ಆಕೆಯ ಕರುಳು ಛಿದ್ರವಾಗಿದೆ.  ತಲೆಯನ್ನು ಭಾರವಾದ ವಸ್ತುವಿನಿಂದ ಜಜ್ಜಲಾಗಿದೆ. ಆಕೆಯ ದೇಹದಲ್ಲಿ 30 ಗಾಯಗಳಾಗಿದ್ದುಸ ಎದೆ ಭಾಗದಲ್ಲಿ ಇರಿದ ಆಳವಾದ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಭೀಕರ ಅಪಘಾತ: ಯೂಟರ್ನ್‌ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್