ವಿವಾಹವಾಗಿ ಪುರುಷತ್ವ ಸಾಬೀತುಪಡಿಸಲು ಯೋಗಿ ಆದಿತ್ಯನಾಥ್ ಗೆ ಆಜಂ ಖಾನ್ ಸವಾಲು
ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಮದುವೆಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ ಎಂದು ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಸವಾಲು ಹಾಕಿದ್ದಾರೆ.
ಗೋರಖ್ ಪುರ: ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಮದುವೆಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ ಎಂದು ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಸವಾಲು ಹಾಕಿದ್ದಾರೆ.
ಸಂಸದ ಯೋಗಿ ಆದಿತ್ಯನಾಥ್ ಅವರೊಂದಿಗಿನ ಸಂಬಂಧವನ್ನು ಸರಿಪಡಿಸಿಕೊಳ್ಳುವುದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಆಜಂ ಖಾನ್, ಮೊದಲು ಯೋಗಿ ಆದಿತ್ಯನಾಥ್ ವಿವಾಹವಾಗಿ ತಮ್ಮ ಪೀಳಿಗೆಯನ್ನು ಮುಂದುವರೆಸಲಿ ಎಂದು ಹೇಳಿದ್ದಾರೆ. ಇನ್ನು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ತಲಾಕ್ ಕುರಿತಾದ ಹೇಳಿಕೆಗೂ ಪ್ರತಿಕ್ರಿಯೆ ನೀಡಿರುವ ಆಜಂ ಖಾನ್, ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿ ಬಗ್ಗೆ ಮಾತನಾಡುವುದು ಮಹಿಳೆಯರಿಗೆ ಮಾಡುವ ಅವಮಾನ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಸಚಿವರು ಆಗಿರುವ ಆಜಂ ಖಾನ್, ಈ ಹಿಂದೆಯೂ ಹಲವು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.