ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಸೋಮವಾರ ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಹಾಜರಾಗಬೇಕು ಎಂದು ಸೂಚಿಸಿದೆ.
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಲಂಚಕ್ಕೆ ಬೇಡಿಕೆ ಇಡುತ್ತಿರುವುದರ ಸಿಡಿ ಬಿಡಗಡೆಯಾಗಿತ್ತು. ಈ ಸಂಬಂಧ ಸಿಬಿಐ ತನಿಖೆ ಆರಂಭಿಸಿದ್ದರು. ಆದರೆ, ಇದು ನಕಲಿ ಸಿಡಿ ಎಂದು ರಾವತ್ ಹೇಳಿದ್ದರು.
ಈ ಹಿನ್ನಲೆಯಲ್ಲಿ ಸಿಡಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ವಿಧಿ ವಿಜ್ಞಾನ ಪ್ರಯೋಗಾಲಯ ಸಿಡಿಯನ್ನು ಪರೀಕ್ಷಿಸಿದ್ದು, ಇದು ನಿಜವಾದ ಸಿಡಿ ಎಂದು ವರದಿ ನೀಡಿದೆ ಎಂದು ಸಿಬಿಐ ತಿಳಿಸಿದೆ.
ಹಣದ ಆಮೀಷವೊಡ್ಡುವ ಮೂಲಕ ನಮ್ಮನ್ನು ಖರೀದಿಸಲು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಕುದುರೆ ವ್ಯಾಪರಕ್ಕೆ ಪ್ರಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಬಂಡಾಯ ಶಾಸಕರು ಆರೋಪಿಸಿ ಸ್ಟಿಂಗ್ ಆಪರೇಶನ್ ಸಿಡಿಯನ್ನು ಬಿಡುಗಡೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics