ಐಆರ್ ಸಿಟಿಸಿ ವೆಬ್ ಸೈಟ್ ಹ್ಯಾಕ್: ಮಾಹಿತಿ ಸೋರಿಕೆ; ದುರ್ಬಳಕೆ ಸಾಧ್ಯತೆ
ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್(ಐಆರ್ ಸಿಟಿಸಿ) ಹ್ಯಾಕ್ ಮಾಡಲಾಗಿದ್ದು, ಲಕ್ಷಾಂತರ ಜನರ...
ನವದೆಹಲಿ: ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ (ಐಆರ್ ಸಿಟಿಸಿ) ವೆಬ್ ಸೈಟ್ ಹ್ಯಾಕ್ ಮಾಡಲಾಗಿದ್ದು, ಲಕ್ಷಾಂತರ ಜನರ ವೈಯಕ್ತಿಕ ಮಾಹಿತಿ ಕಳುವಾಗಿರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಐಆರ್ ಸಿಟಿಸಿ ವೆಬ್ ಸೈಟ್ ಅತಿದೊಡ್ಡ ಟ್ರ್ಯಾವಲ್ ಇ-ಕಾಮರ್ಸ್ ವೆಬ್ ಸೈಟ್ ಆಗಿದ್ದು, ಪ್ರತಿದಿನ ಲಕ್ಷಾಂತರ ವ್ಯವಹಾರ ನಡೆಯುತ್ತದೆ. ಅಷ್ಟೇ ಅಲ್ಲದೇ ಲಕ್ಷಾಂತರ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಳ್ಳಲು ಗ್ರಾಹಕರು ತಮ್ಮ ವೈಯಕ್ತಿಕ ಮಾಹಿತಿ ಅಂದರೆ, ಫೋನ್ ನಂಬರ್, ಇಮೇಲ್ ಐಡಿ, ಆಧಾರ್ ಕಾರ್ಡ್, ಡಿಎಲ್ ನಂಬರ್ ಸೇರಿದಂತೆ ಇತರೆ ಮಾಹಿತಿಗಳನ್ನು ದಾಖಲಿಸಿರುತ್ತಾರೆ.
ಪೊಲೀಸರು ತಮ್ಮ ಬಳಿ ಇರುವ ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡ ನಂತರ ನಾವು ಪರಿಶೀಲಿಸಿ ವಿವರವಾದ ಹೇಳಿಕೆ ನೀಡುವುದಾಗಿ ಐಆರ್ ಸಿಟಿಸಿ ಪಿಆರ್ ಒ ತಿಳಿಸಿದ್ದಾರೆ.
ಪೊಲೀಸರು ತಮ್ಮ ಬಳಿ ಇರುವ ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಂಡ ನಂತರ ನಾವು ಪರಿಶೀಲಿಸಿ ವಿವರವಾದ ಹೇಳಿಕೆ ನೀಡುವುದಾಗಿ ಐಆರ್ ಸಿಟಿಸಿ ಪಿಆರ್ ಒ ತಿಳಿಸಿದ್ದಾರೆ.
ಐಆರ್ ಸಿಟಿಸಿ ವೆಬ್ ಸೈಟನ್ನು ಹ್ಯಾಕ್ ಮಾಡಲಾಗಿದ್ದು, ಮಾಹಿತಿಗಳನ್ನು ಕದ್ದಿರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸೈಬರ್ ಪೊಲೀಸರು ಐಆರ್ ಸಿಟಿಸಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಐಆರ್ ಸಿಟಿಸಿ ಇಲಾಖೆ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.