ಅತ್ಯಾಚಾರವನ್ನು ಖಂಡಿಸಿ ಕೇರಳ ವಿವಿಯ ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

ಜಿಶಾ ಅತ್ಯಾಚಾರ ಪ್ರಕರಣ: ಕೇರಳ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

ಜಿಶಾ ಅತ್ಯಾಚರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.

ನವದೆಹಲಿ: ಏಪ್ರಿಲ್ 28 ರಂದು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದ ಜಿಶಾ ಎಂಬಾಕೆಯನ್ನು ಪೈಶಾಚಿಕ ರೀತಿಯಲ್ಲಿ ಅತ್ಯಾಚರವೆಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.
ಸಂಸತ್ ನಲ್ಲಿ ಜಿಶಾ ಅತ್ಯಾಚಾರ ಪ್ರಕರಣ ಪ್ರತಿಧ್ವನಿಸಿ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳ ಸರ್ಕಾರದಿಂದ ವಿಸ್ತೃತ ವರದಿ ನೀಡುವಂತೆ ಕೇಳಿದೆ. ಕೇಂದ್ರ ಸರ್ಕಾರದೊಂದಿಗೆ ರಾಷ್ಟ್ರೀಯ ಮಾನವಹಕ್ಕು ಆಯೋಗ ಸಹ ಕೇರಳ ಸರ್ಕಾರಕ್ಕೆ ನೊಟೀಸ್ ನೀಡಿದ್ದು ವರದಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯಸಭೆಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್, ಜಿಶಾ ನಿವಾಸಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಸಿಪಿಎಂ ನ ಸದಸ್ಯ ಸಿಪಿ ನಾರಾಯಣನ್ ರಾಜ್ಯಸಭೆಯಲ್ಲಿ ಜಿಶಾ ಅತ್ಯಾಚಾರ ಪ್ರಕರಣವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್