ತೆಲಂಗಾಣ: ಬಿಸಿಯೂಟಕ್ಕಿಲ್ಲ ಮೊಟ್ಟೆ, ಬೇಳೆ; ಅನ್ನಕ್ಕೆ ಖಾರದ ಪುಡಿ ಕಲಸಿ ತಿನ್ನುವಂತೆ ಒತ್ತಾಯ
ಬೇಸಿಗೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ತೆಲಂಗಾಣ ಸರ್ಕಾರ ನೀಡಿರುವ ಆದೇಶ ಮಕ್ಕಳ ಪಾಲಿಗೆ ಬಿಸಿತುಪ್ಪವಾಗಿದೆ....
ಮಹಬೂಬನಗರ: ಬೇಸಿಗೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ತೆಲಂಗಾಣ ಸರ್ಕಾರ ನೀಡಿರುವ ಆದೇಶ ಮಕ್ಕಳ ಪಾಲಿಗೆ ಬಿಸಿತುಪ್ಪವಾಗಿದೆ.
ತೆಲಂಗಾಣದ ಹಲವು ಪ್ರದೇಶಗಳಲ್ಲಿ ಆಹಾರ ಸರಬರಾಜು ಮಾಡುವ ಏಜೆನ್ಸಿಗಳು ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕೇವಲ ಮೆಣಸಿನಕಾಯಿ ಪುಡು ಬೆರೆಸಿದ ಅನ್ನ ನೀಡಿ ಡಯಟ್ ಮಾಡಿಸುತ್ತಿದ್ದಾರೆ.
ಕೇಂದ್ರ ಸರ್ಕಾರ ಮಕ್ಕಳಿಗೆ ಚಪಾತಿ, ಮೊಟ್ಟೆ, ತರಕಾರಿಗಳನ್ನು ನೀಡುವಂತೆ ಆದೇಶ ನೀಡಿದ್ದರೂ ಮಹಬೂಬ ನಗರ ಜಿಲ್ಲೆಯ ಬಿಜ್ವಾರಾಂ ಗ್ರಾಮ ಸೇರಿದಂತೆ ಹಲವು ಶಾಲೆಗಳಲ್ಲಿ ಕೇವಲ ಅನ್ನ ಮತ್ತು ಸಾಂಬಾರು ಪುಡಿ ಕಲೆಸಿಕೊಡುತ್ತಿರುವುದು, ಅಧಿಕಾರಿಗಳು ಪರಿಶೀಲನೆ ನಡೆಸಲು ಬಂದಾಗ ತಿಳಿದು ಬಂದಿದೆ.
ಇದನ್ನು ನೋಡಿದ ಅಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ. ಮಕ್ಕಳಿಗೆ ಯಾವುದೇ ರೀತಿಯ ಪೌಷ್ಠಿಕ ಆಹಾರ ನೀಡುತ್ತಿಲ್ಲ, ಜೊತೆಗೆ ಕಡಿಮೆ ಪ್ರಮಾಣದಲ್ಲಿ ಅಡುಗೆ ತಯಾರಿಸಲಾಗುತ್ತದೆ. ಸ್ವಲ್ಪ ಪ್ರಮಾಣದಲ್ಲಿ ಊಟ ನೀಡಲಾಗುತ್ತದೆ ಎಂದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಅಧಿಕಾರಿಗಳಿಗೆ ದೂರು ನೀಡಿದ್ದಾನೆ. ದೂರು ದಾಖಲಿಸಿಕೊಂಡಿರುವ ಅಧಿಕಾರಿಗಳು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ. .
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.