ದೇಶ

ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಕೇರಳ ವಿದ್ಯಾರ್ಥಿನಿಯ ತಾಯಿ ಭೇಟಿಗೆ ಪ್ರಧಾನಿ ಮೋದಿ ಮುಂದು

Srinivas Rao BV

ನವದೆಹಲಿ: ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಕೇರಳದ ಕಾನೂನು ವಿದ್ಯಾರ್ಥಿನಿ ಜಿಶಾ ಅವರ ತಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡುವ ಸಾಧ್ಯತೆ ಇದೆ.
ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೊಂದ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್ ಸಹ ಕೇರಳಕ್ಕೆ ಭೇಟಿ ನೀಡಿ ಹತ್ಯೆಗಿಡಾದ ಯುವತಿಯ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಕೇರಳ ವಿಧಾನಸಭಾ ಚುನಾವಣೆಗೆ 12 ದಿನಗಳಷ್ಟೇ ಬಾಕಿ ಇದ್ದು, ಈ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾನೂನು ವಿದ್ಯಾರ್ಥಿನಿಯಾಗಿದ್ದ ಜಿಶಾ ಅವರನ್ನು ಅತ್ಯಾಚಾರ ಮಾಡಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು 2012 ರ ನಿರ್ಭಯಾ ಪ್ರಕರಣದೊಂದಿಗೆ ಹೋಲಿಕೆ ಮಾಡಲಾಗುತ್ತಿದ್ದು, ಮೃತ ಜಿಶಾ ದೇಹದ ಮೇಲೆ 38 ಗಾಯಗಳಿರುವುದು ಪತ್ತೆಯಾಗಿದೆ.
ಏ.28 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಶಂಕಿತ ಅಪರಾಧಿಗಳ ರೇಖಾ ಚಿತ್ರ ಬಿಡುಗಡೆ ಮಾಡಿದ್ದಾರೆ. 

SCROLL FOR NEXT