ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ದುರ್ಬಲಗೊಳಿಸಲು ಯತ್ನಿಸಿತ್ತಾ ಜಾರಿ ನಿರ್ದೇಶನಾಲಯ? 
ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ದುರ್ಬಲಗೊಳಿಸಲು ಯತ್ನಿಸಿತ್ತಾ ಜಾರಿ ನಿರ್ದೇಶನಾಲಯ?

ಇತ್ತೀಚಿನ ವರದಿ ಪ್ರಕಾರ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವೇ ದುರ್ಬಲಗೊಳಿಸಿತ್ತು ಎಂಬ ಆರೋಪ ಕೇಳಿಬಂದೆ.

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದೊಂದು ಬೆಳವಣಿಗೆಗಳಾಗುತ್ತಿದ್ದು, ಇತ್ತೀಚಿನ ವರದಿ ಪ್ರಕಾರ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವೇ ದುರ್ಬಲಗೊಳಿಸಿತ್ತು ಎಂಬ ಆರೋಪ ಕೇಳಿಬಂದೆ.     
ಹಣದುರುಪಯೋಗ ತಡೆ ಕಾಯ್ದೆ 2002 ರ ಅಡಿಯಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣವನ್ನು ತನಿಖೆ ನಡೆಸಲು ಇಡಿ(ಜಾರಿ ನಿರ್ದೇಶನಾಲಯ) ಆಸಕ್ತಿ ತೋರಿರಲಿಲ್ಲ, 2013 ರ ಡಿಸೆಂಬರ್ ನಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದ ನಂತರವೂ 7 ತಿಂಗಳ ವರೆಗೆ ತನಿಖೆಯನ್ನು ನಡೆಸಲಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇಷ್ಟೇ ಅಲ್ಲದೇ ಜಾರಿ ನಿರ್ದೇಶನಾಲಯದ ಈ ಹಿಂದಿನ ಮುಖ್ಯಸ್ಥರು ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣವನ್ನು ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆಯಡಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿ ತನಿಖೆಯನ್ನು ದುರ್ಬಲಗೊಳಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ನಾಗರಿಕ ಅಪರಾಧಗಳ ವ್ಯಾಪ್ತಿಗೆ ಬರುತ್ತದೆ, ಕಳೆದ ವರ್ಷದ ವರೆಗೂ  ಈ ಕಾಯ್ದೆಯಡಿಯಲ್ಲಿ ಅಪರಾಧ ಸಾಬೀತಾದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಈಗ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಜಾರಿ ನಿರ್ದೇಶನಾಲಯಕ್ಕೆ ಅಸ್ತಿ ಮುಟ್ಟುಗೋಲು ಹಾಕಿ, ಶಂಕಿತರನ್ನು ವಿಚಾರಣೆ ನಡೆಸುವ ಅಧಿಕಾರವನ್ನು ನೀಡಲಾಗಿದೆ. ಹಣ ವರ್ಗಾವಣೆಯಾಗಿರುವುದರ ಕುರಿತು ಇಡಿ ಸೂಕ್ತ ತನಿಖೆ ನಡೆಸದೆ ಇರುವುದು ತನಿಖೆ ದುರ್ಬಲಗೊಳ್ಳುವಂತೆ ಮಾಡಿದೆ ಎಂಬುದು ಸದ್ಯಕ್ಕೆ ಕೇಳಿಬಂದಿರುವ ಹೊಸ ಆರೋಪವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT