ನವದೆಹಲಿ: ಸಂಸತ್ತಿನಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿರುವ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧದ ಎಫ್ಐಆರ್ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಅಗಸ್ಟಾ ಹೆಲಿಕಾಪ್ಟರ್ ಹಗರಣ ಸಂಬಂಧ ಇಟಲಿ ಕೋರ್ಟ್ ತೀರ್ಪಿನಲ್ಲಿ ಪ್ರಸ್ತಾಪವಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಹಾಗೂ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆಯಾಗಬೇಕು ಎಂದು ವಕೀಲ ಎಂ.ಎಲ್.ಶರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಕೂ ನ್ಯಾಯಮೂರ್ತಿ ಶಿವಕಿರ್ತಿ ಸಿಂಗ್ ಅವರು, ಈ ಸಂಬಂಧ ಕೇಂದ್ರ ಹಾಗೂ ಸಿಬಿಐ ನೋಟಿಸ್ ನೀಡಿದ್ದಾರೆ.
ಕಳೆದ ಏಪ್ರಿಲ್ 7ರಂದು ಇಟಲಿ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics