ಉತ್ತರಾಖಂಡ್ ವಿಧಾನಸಭೆ ಬಹುಮತ ಸಾಬೀತಿಗೆ ಕೇಂದ್ರದ ಸಮ್ಮತಿ 
ದೇಶ

ಉತ್ತರಾಖಂಡ್ ವಿಧಾನಸಭೆ ಬಹುಮತ ಸಾಬೀತಿಗೆ ಕೇಂದ್ರದ ಸಮ್ಮತಿ: ಮೇ.10ಕ್ಕೆ ವಿಶ್ವಾಸಮತ

ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು...

ನವದೆಹಲಿ: ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು ಮೇ.10 ರಂದು ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. 

ಉತ್ತರಾಖಂಡ್ ರಾಷ್ಟ್ರಪತಿ ಆಡಳಿತದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಕೇಂದ್ರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ, ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ವೀಕ್ಷಕರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ವೀಕ್ಷಕರಾಗಿ ನೇಮಕಗೊಳ್ಳುವವರು, ನಿವೃತ್ತ ಚುನಾವಣಾ ಆಯುಕ್ತರಾಗಿರಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು, ವಿಧಾನಸಭೆಯಲ್ಲಿ ಎರಡು ರಾಜಕೀಯ ಮೈತ್ರಿಗಳ ನಡುವಿನ  ಸಾಮರ್ಥ್ಯ ಪರೀಕ್ಷೆಯಾಗಿರಬೇಕು ಎಂದು ಹೇಳಿದ್ದಾರೆ.

ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅನರ್ಹಗೊಂಡ ಕಾಂಗ್ರೆಸ್ ನ 9 ಶಾಸಕರು ಮತ ಚಲಾಯಿಸುವಂತಿಲ್ಲ ಎಂದು  ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ನಿರ್ದೇಶನದಂತೆ ಬಹುಮತ ಪರೀಕ್ಷೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!