ಕಾಂಗ್ರೆಸ್ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ ರ್ಯಾಲಿಯಲ್ಲಿ ರಾಬರ್ಟ್ ವಾದ್ರಾ ಫೋಟೋ
ಕಾಂಗ್ರೆಸ್ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ ರ್ಯಾಲಿ’ಯಲ್ಲಿ ರಾಬರ್ಟ್ ವಾದ್ರಾ ಅವರ ಚಿತ್ರವಿದ್ದ ಬ್ಯಾನರ್ ತೀವ್ರ ಚರ್ಚೆಗೆ ಗ್ರಾಸವಾಗಿದೆ....
ನವದೆಹಲಿ: ಕಾಂಗ್ರೆಸ್ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ ರ್ಯಾಲಿ’ಯಲ್ಲಿ ರಾಬರ್ಟ್ ವಾದ್ರಾ ಅವರ ಚಿತ್ರವಿದ್ದ ಬ್ಯಾನರ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಕೇಂದ್ರದ ನಿಲುವನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ‘ಪ್ರಜಾತಂತ್ರ ಉಳಿಸಿ’ ಎಂಬ ಘೊಷಣೆ ಮೊಳಗಿತು. ಈ ಸಂದರ್ಭ ಪ್ರದರ್ಶನಗೊಂಡ ಬ್ಯಾನರ್ನಲ್ಲಿ ವಾದ್ರಾ ರಾರಾಜಿಸಿದ್ದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
ಹರ್ಯಾಣಾದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುವ ಮೂಲಕ ವಿವಾದಿತ ವ್ಯಕ್ತಿಯಾಗಿದ್ದ ವಾದ್ರಾ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಇರುವ ಬ್ಯಾನರ್ನಲ್ಲಿ ವಾದ್ರಾ ಭಾವಚಿತ್ರವೂ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.