ಡೆಹ್ರಾಡೂನ್: ಕಾಡ್ಗಿಚ್ಚಿನಿಂದ ತತ್ತರಿಸಿ ಹೋಗಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1ರಷ್ಟು ತೀವ್ರತೆ ದಾಖಲಾಗಿದೆ.
ಉತ್ತರಾಖಂಡದ ಪಿತೋರ್ಘಡ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಲಘು ಭೂಕಂಪ ಸಂಭವಿಸಿದ್ದು, ಭೂಮಿಯಿಂದ 15 ಕಿ.ಮೀ. ಆಳದಲ್ಲಿ ಭೂಕಂಪನ ಸಂಭವಿಸಿದೆ. ಕಂಪನದಿಂದಾಗಿ ಈ ವರೆಗೂ ಯಾವುದೇ ಸಾವು-ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ತಿಳಿದುಬಂದಿದೆ. ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ವರದಿ ತಿಳಿಸಿದೆ.