ಸುಬ್ರತೋ ರಾಯ್ ಅವರ ತಾಯಿ ಛಬಿ ರಾಯ್ (ಸಂಗ್ರಹ ಚಿತ್ರ) 
ದೇಶ

ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋ ರಾಯ್ ಗೆ ಮಾತೃ ವಿಯೋಗ

ಷೇರುದಾರರಿಗೆ ನೀಡಬೇಕಿದ್ದ ಹಣವನ್ನು ನೀಡಲಾಗದೇ ಜೈಲು ಪಾಲಾಗಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋರಾಯ್ ಅವರ ತಾಯಿ ಛಬಿ ರಾಯ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ...

ಲಖನೌ: ಷೇರುದಾರರಿಗೆ ನೀಡಬೇಕಿದ್ದ ಹಣವನ್ನು ನೀಡಲಾಗದೇ ಜೈಲು ಪಾಲಾಗಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋರಾಯ್ ಅವರ ತಾಯಿ ಛಬಿ ರಾಯ್ ಅವರು ಶುಕ್ರವಾರ  ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

95 ವರ್ಷದ ಛಬಿರಾಯ್ ಅವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷದಳಿಂದ ಅನಾರೋಗ್ಯ ಪೀಡಿತರಾಗಿದ್ದ ಛಬಿರಾಯ್ ಅವರು ಈಗ್ಗೆ ಕೆಲ  ದಿನಗಳಿಂದ ಗಂಭೀರ ಸ್ಥಿತಿಯಲ್ಲಿದ್ದರು. ಹೀಗಾಗಿ ಅವರನ್ನು ಲಖನೌನ ಸಹರಾ ಶಹರ್ ನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಮುಂಜಾನೆ ಅವರು ಚಿಕಿತ್ಸೆ  ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಹರಾ ಸಂಸ್ಥೆಯ ವಕ್ತಾರರು, ದಶಕಗಳಿಂದ ಸಹರಾ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಛಬಿರಾಯ್ ಅವರು ಶುಕ್ರವಾರ  ಮುಂಜಾನೆ ಸುಮಾರು 1.30ರ ವೇಳೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದು, ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು  ಎಂದು ಹೇಳಿದ್ದಾರೆ.

ಇನ್ನು ತಾಯಿ ನಿಧನರಾದ ಹಿನ್ನಲೆಯಲ್ಲಿ ಪ್ರಸ್ತುತ ಜೈಲಿನಲ್ಲಿರುವ ಸಹರಾ ಸಂಸ್ಥೆ ಮುಖ್ಯಸ್ಥ ಸುಬ್ರತೋ ರಾಯ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಆಗಮಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?