ಸೋನಿಯಾ ಗಾಂಧಿ 
ದೇಶ

ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಲೋಕತಂತ್ರ ಉಳಿಸಿ ಯಾತ್ರೆ

ಕೇಂದ್ರ ಎನ್ ಡಿ ಎ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಲೋಕತಂತ್ರ ಬಚಾವೋ ಯಾತ್ರೆ ಹಮ್ಮಿಕೊಳ್ಳಲಾಗಿದೆ....

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಲೋಕತಂತ್ರ ಬಚಾವೋ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅರುಣಾಚಲಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ನವದೆಹಲಿಯಲ್ಲಿ 'ಪ್ರಜಾಪ್ರಭುತ್ವ ಉಳಿಸಿ' ಜಂತರ್ ಮಂತರ್ ನಿಂದ ಸಂಸತ್ ಭವನದ ವರಗೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ,

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಬೃಹತ್ ಮೆರವಣಿಗೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.
 

ಇದೇ ವೇಳೆ ಬಿಜೆಪಿ ಕೂಡ ಹಿರಿಯ ಕಾಂಗ್ರೆಸ್  ಪಕ್ಷ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ  ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ