ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮು ಜಿಲ್ಲೆಯಲ್ಲಿ ಭಾರತೀಯ ಯೋಧರ ಕಾರ್ಯಾಚರಣೆ ವೇಳೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭಾರತೀಯ ಯೋಧರು ಸ್ಥಳೀಯ ಪೊಲೀಸರೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡು ಹಾರಿಸಿದ್ದಾರೆ. ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಅವರನ್ನು ಅಶ್ಫಾಕ್ ಅಹ್ಮದ್ ದಾರ್, ಇಶ್ಫಾಕ್ ಅಹ್ಮದ್ ಬಾಬಾ, ಹಸೇಬ್ ಅಹ್ಮದ್ ಎಂದು ಗುರುತಿಸಲಾಗಿದೆ.
ಇನ್ನು ಘಟನಾ ಸ್ಥಳದಲ್ಲಿ ಉಗ್ರರು ಬಳಸುತ್ತಿದ್ದ ಮೂರು ಬಂದೂಕುಗಳನ್ನು ಯೋಧರು ವಶಪಡಿಸಿಕೊಂಡಿದ್ದಾರೆ.