ನವದೆಹಲಿ: ಸುಮಾರು 10 ತಿಂಗಳ ನಂತರ ದೆಹಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಶಬ್ಧ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಕಳೆದ ವರ್ಷ ಜುಲೈ ನಲ್ಲಿ ಕೇಜ್ರಿವಾಲ್ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 14ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಸಿಎಂಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರು ಸಂದರ್ಶನವೊಂದರಲ್ಲಿ ಪೊಲೀಸರ ವಿರುದ್ಧ ‘ತುಲ್ಲಾ’ಎಂಬ ಪದ ಬಳಸಿದ್ದಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಸಂಬಂಧ ಇಬ್ಬರು ಪೊಲೀಸ್ ಪೇದೆಗಳು ಎರಡು ಬೇರೆ ಬೇರೆ ಪೊಲೀಸ್ ಠಾಣೆಯಲ್ಲಿ ಕೇಜ್ರಿವಾಲ್ ವಿರುದ್ಧ ಕೇಸ್ ದಾಖಲಿಸಿದ್ದರು. ನ್ಯಾಯಾಲಯವು ಕೇಜ್ರಿವಾಲ್ಗೆ ಸಮನ್ಸ್ ಕಳುಹಿಸಿದೆ.