ನವದೆಹಲಿ: ಮಹಿಳಾ ಶಕ್ತಿಯನ್ನು ಹಾಡಿ ಹೊಗಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಮತ್ತು ಸಮುದಾಯಗಳ ಪಾಲ್ಗೊಳ್ಳುವಿಕೆ ಅದರಲ್ಲೂ ಬರ ನಿರ್ವಹಣೆಯಲ್ಲಿ ನಾರಿ ಶಕ್ತಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜೊತೆ ಬರಗಾಲ ಕುರಿತು, ರಾಜ್ಯ ತೆಗೆದುಕೊಂಡಿರುವ ಕ್ರಮಗಳ ಕುರಿತು ಅವರು ಮಾತುಕತೆ ನಡೆಸಿದರು.
ದೇಶದ ಜನರು ಅದರಲ್ಲೂ ರೈತರು ಬರಗಾಲದಿಂದ ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಗೆ ಕೆಲಸ ಮಾಡಬೇಕು. ಮಧ್ಯಮ ಮತ್ತು ದೀರ್ಘಾವಧಿ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದರು.
ಮಾನ್ಸೂನ್ ಗೆ ಮೊದಲು ನೀರಿನ ಪುನರ್ಭರ್ತಿಕಾರ್ಯ ಮತ್ತು ಸಂರಕ್ಷಣೆ ಕಾರ್ಯ ಮಾಡಬೇಕು. ವೈಜ್ಞಾನಿಕ ಮಾದರಿಯಲ್ಲಿ ಬೆಳೆಗಳನ್ನು ಬೆಳೆಸಬೇಕು ಎಂದರು. ನೀರಿನ ಸಂರಕ್ಷಣೆ ಮತ್ತು ನಿರ್ವಹಣೆ ವಿಷಯ ಮಹಿಳೆಯರಿಗೆ ಹೆಚ್ಚು ಪರಿಣಾಮಕಾರಿಯಾಗಿ ತಿಳಿದಿದ್ದು, ಅವರು ಈ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಪ್ರಧಾನಿ ಹೇಳಿದರು.
ಅವರು ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಹ ಆ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಿದ್ದಾರೆ.