ಶಂಕಿತ ಉಗ್ರರು 
ದೇಶ

ಸಾಕ್ಷ್ಯಾಧಾರಗಳ ಕೊರತೆ: ದೆಹಲಿ ಪೊಲೀಸರಿಂದ 4 ಶಂಕಿತ ಉಗ್ರರ ಬಿಡುಗಡೆ

ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಕೆಲವು ಶಂಕಿತ ಉಗ್ರರನ್ನು ಬಿಡುಗಡೆ...

ದೆಹಲಿ: ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ಕೆಲವು ಶಂಕಿತ ಉಗ್ರರನ್ನು ಬಿಡುಗಡೆ ಮಾಡಿದ್ದಾರೆ.
ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪ ಮೇಲೆ ಕಳೆದ ಮಂಗಳವಾರ 10 ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆ ಪೈಕಿ ನಾಲ್ವರನ್ನು ಇಂದು ಬಿಡುಗಡೆಗೊಳಿಸಿದ್ದಾರೆ.
ಮೂರು ದಿನಗಳ ವಿಚಾರಣೆಯ ಬಳಿಕ ನಾಲ್ವರು ಶಂಕಿತರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ದೊರೆಯದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಆ ನಾಲ್ವರನ್ನು ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ. 
ವಶಕ್ಕೆ ಪಡೆದಿದ್ದ 10 ಶಂಕಿತ ಉಗ್ರರ ಪೈಕಿ ನಾಲ್ವರನ್ನು ಬಿಡುಗಡೆ ಮಾಡಲಾಗಿದ್ದು, ಉಳಿದ 6 ಮಂದಿಯ ವಿಚಾರಣೆಯನ್ನು ದೆಹಲಿ ಪೊಲೀಸ್ ವಿಶೇಷ ದಳ ಮುಂದುವರೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP