ದಾವೂದ್ ಇಬ್ರಾಹಿಂ 
ದೇಶ

ಹಿಂದೂ ನಾಯಕರನ್ನು ಹತ್ಯೆ ಮಾಡಿದರೆ ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ನೌಕರಿ: ದಾವೂದ್ ನ ಡಿ ಕಂಪನಿಯ ಆಮಿಷ

ಡಿ-ಕಂಪನಿ ಕೋಮುಗಲಭೆ ಸೃಷ್ಟಿಸಿ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡುವುದಕ್ಕೆ ಒಡ್ಡಿದ ಆಮಿಷಗಳೂ ಬಹಿರಂಗವಾಗತೊಡಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹವಣಿಸುತ್ತಿರುವುದು ಬೆಳಕಿಗೆ ಬಂದ ಬೆನ್ನಲ್ಲೇ, ಡಿ-ಕಂಪನಿ ಕೋಮುಗಲಭೆ ಸೃಷ್ಟಿಸಿ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡುವುದಕ್ಕೆ ಒಡ್ಡಿದ ಆಮಿಷಗಳೂ ಬಹಿರಂಗವಾಗತೊಡಗಿದೆ. 
ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಿ ಕೋಮುಗಲಭೆ ಸೃಷ್ಟಿ ಮಾಡುವುದಕ್ಕಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದವರಿಗೆ ದಕ್ಷಿಣ ಆಫ್ರಿಕಾದಲ್ಲಿ ಹಣ ಹಾಗೂ ಉತ್ತಮ ನೌಕರಿ ಕೊಡಿಸುವುದಾಗಿ ಡಿ ಕಂಪನಿ ಆಮಿಷವೊಡ್ಡುತ್ತಿತ್ತು ಎಂದು ಅಹಮದಾಬಾದ್ ಕೋರ್ಟ್ ಗೆ ಎನ್ ಐಎ ಸಲ್ಲಿಸಿರುವ ವರದಿಯಲ್ಲಿ ಹೇಳಿರುವ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿದೆ.
ಕೋಮು ಗಲಭೆ ಸೃಷ್ಟಿಸಲೆಂದೇ ನೇಮಕವಾದವರಿಗೆ ಭಾರತದಲ್ಲಿ ಪೆಟ್ರೋಲ್ ಬಾಂಬ್ ಗಳನ್ನು ಸ್ಫೋಟಿಸಲು ಹಾಗೂ ಚರ್ಚ್ ಗಳ ಮೇಲೆ ದಾಳಿ ನಡೆಸಲು ಸೂಚನೆ ನೀಡಲಾಗುತ್ತಿತ್ತು ಎಂದು ವರದಿಯ ಮೂಲಕ ತಿಳಿದುಬಂದಿದೆ. ಇನ್ನು  ಆರ್ ಎಸ್ ಎಸ್, ವಿಶ್ವ ಹಿಂದೂ ಪರಿಷತ್ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಲು ಡಿ-ಕಂಪನಿಯ ಪ್ರಮುಖ ಪಾತಕಿಗಳಾದ ಜಾವೆದ್ ಚಿಕ್ನ ಅವರಿಗೆ ನೀಡಲಾಗಿದ್ದ 50 ಲಕ್ಷ ರೂ, ದುಬೈ ನಿಂದ ಹವಾಲ ಮೂಲಕ ಗುಜರಾತ್ ಗೆ ಕಳಿಸಲಾಗಿತ್ತು ಎಂಬುದೂ ಬಹಿರಂಗವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel