ದೇಶ

ಹರಿಯಾಣ ಮಾಜಿ ಸಿಎಂ ಭೂಪಿಂದರ್ ಹೂಡಾ ವಿರುದ್ಧ ಎಫ್ಐಆರ್ ದಾಖಲು

Mainashree
ಚಂಡೀಗಢ: ನ್ಯಾಶನಲ್ ಹೆರಾಲ್ಡ್ ಅಕ್ರಮ ಭೂ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. 
ಭೂಪೇಂದ್ರ ಸಿಂಗ್ ಹೆಸರು ನೇರವಾಗಿ ಪ್ರಸ್ತಾಪವಾಗದಿದ್ದರೂ, ಕೆಲವು ಅಧಿಕಾರಿಗಳು ಹಾಗೂ ಅಂದಿನ ಹರಿಯಾಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಹರಿಯಾಣ ಜಾಗೃತ ದಳ ಎಫ್ಐಆರ್ ದಾಖಲಿಸಿದೆ. 
ಭೂಪಿಂದರ್ ಸಿಂಗ್ ಹರಿಯಾಣದ ಸಿಎಂ ಆಗಿದ್ದ ವೇಳೆ, ಹರಿಯಾಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ಈ ವೇಳೆ ಅಧ್ಯಕ್ಷರು, ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಅಸೋಸಿಯೇಟ್ ಜರ್ನಲ್ ಸಿಬ್ಬಂದಿ ಸೇರಿದಂತೆ ಇತರೆ ಅಧಿಕಾರಿಗಳು ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್(ಎಜೆಎಲ್)ನ ಪ್ಲಾಟ್ ಹಂಚಿಕೆಯಲ್ಲಿ ಅಕ್ರಮವೆಸಗಿದ್ದಾರೆಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ. 
ಹೂಡಾ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 409, 420 ಮತ್ತು 120 ಸೆಕ್ಷನ್ ಅಡಿ ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಹ ಆರೋಪಿಗಳಾಗಿದ್ದು, ತನಿಖೆ ನಡೆಯುತ್ತಿದೆ.
SCROLL FOR NEXT