ಬೆಲ್ಜಿಯಂ ಯುವತಿಗೆ ಲೈಂಗಿಕ ಕಿರುಕುಳ: ಓಲಾ ಕ್ಯಾಬ್ ಚಾಲಕನ ಬಂಧನ
ಬೆಲ್ಜಿಯಂ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಓಲಾ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿ...
ನವದೆಹಲಿ: ಬೆಲ್ಜಿಯಂ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಓಲಾ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ರಾಜ್ ಸಿಂಗ್ ಬಂಧಿತ ಆರೋಪಿ. ರಾಜ್ ಸಿಂಗ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ನಿನ್ನೆ ರಾತ್ರಿ ದೆಹಲಿಯಲ್ಲಿ 23 ವರ್ಷದ ಬೆಲ್ಜಿಯಂ ಯುವತಿಗೆ ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಯುವತಿ ಸಿಆರ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಕ್ಯಾಬ್ ನಲ್ಲಿ ಬರಬೇಕಾದರೆ ಮದ್ಯ ದಾರಿಯಲ್ಲಿ ನನಗೆ ಆತ ಚುಂಬಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ತದ ನಂತರ ನನ್ನನ್ನು ಸಿಆರ್ ಪಾರ್ಕ್ ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಆಕೆ ದೂರು ದಾಖಲಿಸಿದ್ದಳು.
ದೂರು ದಾಖಲಿಸಿಕೊಂಡಿರುವ ಪೊಲೀಸರು ಬುಕ್ಕಿಂಗ್ ವಿವರವನ್ನು ಪಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.