ಅಗ್ನಿ-5 ಕ್ಷಿಪಣಿ (ಸಂಗ್ರಹ ಚಿತ್ರ) 
ದೇಶ

ಆಗಸದಲ್ಲಿ ಘರ್ಜಿಸಲು ಸಿದ್ಧವಾಯ್ತು "ಅಗ್ನಿ-5" ಅಣ್ವಸ್ತ್ರ ಕ್ಷಿಪಣಿ

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಲಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಪಾಕಿಸ್ತಾನ ಮತ್ತು ಚೀನಾ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಬಾಲಸೋರ್: ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಲಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಪಾಕಿಸ್ತಾನ ಮತ್ತು ಚೀನಾ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಭಾರತದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಈ ಪ್ರಬಲ ಅಣ್ವಸ್ತ್ರ ಕ್ಷಿಪಣಿಯನ್ನು ಸಿದ್ಧಪಡಿಸಿದ್ದು, ಪಾಕಿಸ್ತಾನದ ಪ್ರದೇಶಗಳು ಒಳಂಗೊಂಡಂತೆ ಚೀನಾದ ಯಾವುದೇ ಭಾಗ ಮತ್ತು ಪಶ್ಚಿಮದಲ್ಲಿ ಯುರೋಪ್‌ನ ಕೊನೆಯ ಅಂಚಿನವರೆಗೂ ಕ್ಷಿಪಣಿಯು ತಲುಪುವ ಸಾಮರ್ಥ್ಯ ಹೊಂದಿದೆ. ಅಗ್ನಿ-5 ಮೂರು ಸ್ತರದ ಕ್ಷಿಪಣಿಯಾಗಿದ್ದು,17 ಮೀ. ಉದ್ದ ಮತ್ತು 1.5 ಟನ್‌ ಭಾರ ಹೊಂದಿದೆ. ಮೊದಲನೇ ಸ್ತರದ ರಾಕೆಟ್‌ ಎಂಜಿನ್‌, ಕ್ಷಿಪಣಿಯನ್ನು 40 ಕಿ.ಮೀ. ಎತ್ತರಕ್ಕೆ ಒಯ್ದರೆ, ಎರಡನೇ ಸ್ತರವು ಕ್ಷಿಪಣಿಯನ್ನು 150 ಕಿ.ಮೀ. ಎತ್ತರಕ್ಕೆ ನೂಕುತ್ತದೆ. 3ನೇ ಸ್ತರವು ಭೂಮಿಗಿಂತ 300 ಕಿ.ಮೀ. ಎತ್ತರಕ್ಕೆ ಕೊಂಡೊಯ್ಯುತ್ತದೆ. ಅಂತಿಮವಾಗಿ 800 ಕಿ.ಮೀ. ಎತ್ತರಕ್ಕೆ ಕ್ಷಿಪಣಿ ತಲುಪುತ್ತದೆ.



ಸುಮಾರು 1 ಸಾವಿರ ಕೆಜಿ ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಈ ಪ್ರಬಲ ಕ್ಷಿಪಣಿಗಿದ್ದು, ಸಂಚಾರಿ ಸಾಮರ್ಥ್ಯ ಇರುವ ಡಬ್ಬಿಯಾಕಾರದ ಕ್ಯಾನಿಸ್ಟರ್‌ನಲ್ಲಿಟ್ಟು ಉಡಾಯಿಸುವಂಥ ಅಗ್ನಿ-5 ಮಾದರಿಯ ಕ್ಷಿಪಣಿ ಇದು. ಉಡಾವಣೆಗೆ ಸ್ಥಿರ ವೇದಿಕೆಯೇ ಬೇಕೆಂದೇನೂ ಇಲ್ಲ. ಮೊಬೈಲ್‌ ಲಾಂಚರ್‌ ವಾಹನ ಬಳಕೆ ಮಾಡಿ ಈ ಕ್ಷಿಪಣಿಯನ್ನು ದೇಶದ ಯಾವುದೇ ಮೂಲೆಯಿಂದಾದರೂ ತ್ವರಿತವಾಗಿ ಉಡಾಯಿಸಬಹುದಾಗಿದೆ. ಇನ್ನು ಕ್ಷಿಪಣಿಯ ಕ್ಯಾನಿಸ್ಟರ್‌ ವ್ಯವಸ್ಥೆ ವೈರಿಗಳ ಕಣ್ತಪ್ಪಿಸಲು ಸಹಕಾರಿಯಾಗುತ್ತದೆ. ಇದೇ ಕಾರಣಕ್ಕೆ ಭಾರತದ ಈ ಪ್ರಬಲ ಕ್ಷಿಪಣಿ ಇದೀಗ ಚೀನಾ ಮತ್ತು ಪಾಕಿಸ್ತಾನ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಈ ಹಿಂದೆ 2012 ಮತ್ತು 2013 ಮತ್ತು 2015ರಲ್ಲಿ ಒಟ್ಟು 3 ಬಾರಿ ಅಗ್ನಿ-5 ಕ್ಷಿಪಣಿಯ ಮೂಲ ಆವೃತ್ತಿಯ ಪರೀಕ್ಷಾರ್ಥ ಉಡ್ಡಯನ ಮಾಡಲಾಗಿತ್ತು. ಈ ಮೂರೂ ಪರೀಕ್ಷೆಯೂ ಅಭೂತಪೂರ್ವ ಯಶಸ್ಸು ಸಾಧಿಸಿತ್ತು. ಇದೀಗ ಮತ್ತೆ ಅಗ್ನಿ-5 ಕ್ಷಿಪಣಿ ಪರೀಕ್ಷೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಇದನ್ನು ಪರೀಕ್ಷೆ ನಡೆಸಲು ಡಿಆರ್ ಡಿಒ ಸಿದ್ಧತೆ ಮಾಡಿಕೊಂಡಿದೆ.

ಮುಂದಿನ ವರ್ಷ ಸೇನೆಗೆ ಸೇರ್ಪಡೆಯಾಗಲಿದೆ ಈ ಪ್ರಬಲ ಮತ್ತು ವಿಧ್ವಂಸಕ ಕ್ಷಿಪಣಿ
ಎಲ್ಲವೂ ಅಂದುಕೊಂಡಂತೆ ನಡೆದರೆ ಎನ್ನೆರಡು ಪರೀಕ್ಷಾರ್ಥ ಪ್ರಯೋಗಗಳ ಬಳಿಕ ಭಾರತದ ಈ ವಿಧ್ವಂಸಕ ಕ್ಷಿಪಣಿ ಭಾರತೀಯ ಸೇನೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿರುವಂತೆ ಮುಂದಿನ ವರ್ಷದೊಳಗಾಗಿ ಈ ಅಗ್ನಿ-5 ಕ್ಷಿಪಣಿಯನ್ನು ಭಾರತೀಯ ಸೇನೆಯ ಕಾರ್ಯಾಚರಣೆಗೆ ಅಳವಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರಧಾನಿ ಕೈಯಲ್ಲೇ ಬಟನ್
ಅಗ್ನಿ-5 ಕ್ಷಿಪಣಿಯನ್ನು ಉಡಾವಣೆ ಮಾಡಲು ಅನುಮತಿ ನೀಡುವ ಅಧಿಕಾರ ಪ್ರಧಾನ ದೇಶದ ಮಂತ್ರಿಗೆ ಮಾತ್ರ ಇದ್ದು, ಅಗ್ನಿ-5 ಕ್ಷಿಪಣಿಯನ್ನು ಯುದ್ಧಕ್ಕಿಂತ ಶಾಂತಿ ಉದ್ದೇಶಕ್ಕೆ ಬಳಸುವ ಉದ್ದೇಶವನ್ನು ಭಾರತ ಹೊಂದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಈ ಅಗ್ನಿ 5 ಕ್ಷಿಪಣಿಯ ಕಾರ್ಯಾಚರಣೆಗೆ ಅನುಮತಿ ನೀಡಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT