ಅಯೋಧ್ಯೆಯಲ್ಲಿ ನವೆಂಬರ್ 9ರಿಂದ ವಿವಾದಿತ ರಾಮಮಂದಿರ ನಿರ್ಮಾಣ?
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಮಂದಿರ ನಿರ್ಮಾಣ ಕಾಮಗಾರಿ ನವೆಂಬರ್ 9ರಿಂದ ಆರಂಭವಾಗಲಿದೆ ಎಂದು ಸಾಧು-ಸಂತರ ತಂಡವೊಂದು...
ಉಜ್ಜಯಿನಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಮಂದಿರ ನಿರ್ಮಾಣ ಕಾಮಗಾರಿ ನವೆಂಬರ್ 9ರಿಂದ ಆರಂಭವಾಗಲಿದೆ ಎಂದು ಸಾಧು-ಸಂತರ ತಂಡವೊಂದು ತಿಳಿಸಿದೆ.
ಪ್ರತಿ 12 ವರ್ಷಗಳಿಗೊಮ್ಮೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ಸಿಂಹಾಸ್ಥ ಕುಂಭಮೇಳ ಇದೇ ಎಪ್ರಿಲ್ 22ರಿಂದ ಆರಂಭವಾಗಿದ್ದು, ಈ ಸಂದರ್ಭದಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಕುರಿತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಅವರು ಕೆಲವು ದಿನಗಳ ಹಿಂದಷ್ಟೇ ವರ್ಷಾಂತ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.