ಬಿಜೆಪಿಯಿಂದ ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ಬಹಿರಂಗ 
ದೇಶ

ಬಿಜೆಪಿಯಿಂದ ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ಬಹಿರಂಗ: ಕ್ಷಮೆ ಕೋರಲು ಕೇಜ್ರಿವಾಲ್ ಗೆ ಆಗ್ರಹ

ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪಡೆದಿರುವ ಪದವಿ ಪ್ರಮಾಣಪತ್ರವನ್ನು ಬಿಜೆಪಿ ಬಹಿರಂಗಗೊಳಿಸಿದ್ದು ಕ್ಷಮೆ ಕೋರುವಂತೆ ಕೇಜ್ರಿವಾಲ್ ಗೆ ಆಗ್ರಹಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರಗಳನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದ ಅರವಿಂದ್ ಕೇಜ್ರಿವಾಲ್ ಗೆ ಉತ್ತರ ನೀಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ಮೇ.9 ರಂದು ಬಿಡುಗಡೆಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪಡೆದಿರುವ ಪದವಿ ಪ್ರಮಾಣಪತ್ರವನ್ನು ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲಘುವಾಗಿ ಮಾತನಾಡಿದ್ದಕ್ಕೆ ಅರವಿಂದ್ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.  
ಯಾವುದೇ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡುವುದಕ್ಕೂ ಮುನ್ನ ಸತ್ಯ, ಅಸತ್ಯತೆಗಳನ್ನು ಪರಿಗಣಿಸಬೇಕು, ಒಬ್ಬ ಪ್ರಧಾನಿಯ ಪದವಿ ಪ್ರಮಾಣಪತ್ರಗಳನ್ನು ನಾನು ಬಿಡುಗಡೆಗೊಳಿಸುವ ದಿನ ಬರುತ್ತದೆ ಎಂದುಕೊಂಡಿರಲಿಲ್ಲ. ಇಂತಹ ಪರಿಸ್ಥಿತಿ ಎದುರಾಗಿರುವುದಕ್ಕೆ ಅವಮಾನ ಉಂಟಾಗಿದ್ದು ಇದಕ್ಕೆ ಕಾರಣರಾದ ಅರವಿಂದ್ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಪದವಿ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ, ಆದ್ದರಿಂದ ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರವನ್ನು ಬಹಿರಂಗಗೊಳಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!