ರಾಬರ್ಟ್ ವಾದ್ರಾ 
ದೇಶ

ರಾಬರ್ಟ್ ವಾದ್ರಾ ಭೂಹಗರಣ ಸಂಬಂಧ ಇಂದು ಚರ್ಚೆ: ಲೋಕಸಭೆಯಲ್ಲಿ ಕೋಲಾಹಲ ಸಾಧ್ಯತೆ

: ಅಗಸ್ತಾ ವೆಸ್ಟ್​ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಕಾಂಗ್ರೆಸ್ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದ ಬಿಜೆಪಿ, ಇದೀಗ ರಾಬರ್ಟ್ ವಾದ್ರಾ ಅಸ್ತ್ರ ಪ್ರಯೋಗಿಸಲು..

ನವದೆಹಲಿ: ಅಗಸ್ತಾ ವೆಸ್ಟ್​ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಕಾಂಗ್ರೆಸ್ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದ ಬಿಜೆಪಿ, ಇದೀಗ ರಾಬರ್ಟ್ ವಾದ್ರಾ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಬಿಜೆಪಿ ಸಂಸದ ಕಿರೀಟ್ ಸೋಮಯ್ಯ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕೇಳಿ ಬಂದಿರುವ ಅಕ್ರಮಗಳ ಬಗ್ಗೆ ಸಂಸತ್​ನಲ್ಲಿ ಸೋಮವಾರ ವಿಷಯ ಮಂಡಿಸಲು ಅನುಮತಿ ಕೋರಿ ಲೋಕಸಭೆ ಸ್ಪೀಕರ್​ಗೆ ಮನವಿ ಮಾಡಿದ್ದಾರೆ.

 ರಾಬರ್ಟ್ ವಾದ್ರಾ ಒಡೆತನದ ಅಲ್ಲಿಜೆನಿ ಫಿನ್​ಲೀಸ್ ಪ್ರೈ. ಲಿ ಹಾಗೂ ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಯಲ್ಲೂ ಸಾಕಷ್ಟು ಅಕ್ರಮ ನಡೆದಿದೆ. ಈಗಾಗಲೇ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ 100 ಪುಟಗಳ ವಿವರ ಸಲ್ಲಿಸಿದ್ದೇನೆ ಎಂದು ಸಂಸದ ಸೋಮಯ್ಯ ತಿಳಿಸಿದ್ದಾರೆ.

2009ರಿಂದ 2011ರ ವರೆಗೆ ಬಿಕಾನೇರ್​ನಲ್ಲಿ 1400 ಎಕರೆ ಭೂಮಿಯನ್ನು ಏಳು ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದು, ಈ ಪೈಕಿ ವಾದ್ರಾ ಜತೆ ಸಂಪರ್ಕ ಹೊಂದಿರುವ ಸ್ಕೈಲೈಟ್ ಹಾಸ್ಪಿಟಾಲಿಟಿ ಕೂಡ ಒಂದಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT