ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ಪ್ರಜಾಪ್ರಭುತ್ವ ಕಗ್ಗೊಲೆಗೆ ಜನರು ಆಸ್ಪದ ನೀಡುವುದಿಲ್ಲ: ರಾಹುಲ್ ಗಾಂಧಿ

ಉತ್ತರಾಖಂಡ ವಿಶ್ವಾಸಮತ ಯಾಚನೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಅತ್ತ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ...

ನವದೆಹಲಿ: ಉತ್ತರಾಖಂಡ ವಿಶ್ವಾಸಮತ ಯಾಚನೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಅತ್ತ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ವಿಶ್ವಾಸಮತ ಯಾಚನೆ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಅವರ ಕೈಲಾದ ಕೆಟ್ಟ ಕೆಲಸವನ್ನು ಅವರು ಮಾಡಿದ್ದಾರೆ. ನಾವು ಉತ್ತಮವಾದದನ್ನೇ ಮಾಡಿದ್ದೇವೆ. ಉತ್ತರಾಖಂಡದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿ, ಈ ಬೆಳವಣಿಗೆಯಿಂದಾದರೂ ಪ್ರಧಾನಿ ಮೋದಿ ಪಾಠ ಕಲಿಯಬೇಕು. ಪ್ರಜಾ ಪ್ರಭುತ್ವವವನ್ನು ಕಗ್ಗೊಲೆ ಮಾಡುವುದನ್ನು ಈ ದೇಶದ ಜನ ಮತ್ತು ತಮ್ಮ ಹಿರಿಯರು ಸ್ಥಾಪಿಸಿದ ಈ ದೇಶದ ಸಾರ್ವಜಿನಕ ಸಂಸ್ಥೆಗಳು ಸಹಿಸಲಾರವು ಎಂದು ಹೇಳಿದ್ದಾರೆ.

ನಿನ್ನೆ ನಡೆದ ಹರೀಶ್ ರಾವತ್ ಅವರ ವಿಶ್ವಾಸ ಮತ ಯಾಚನೆ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ಇಂದು ಘೋಷಣೆ ಮಾಡಿದೆ. ಅದರಂತೆ ಒಟ್ಟು 61 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಹರೀಶ್ ರಾವತ್ ಅವರು 33 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದ್ದಾರೆ. ಸತತ 3 ತಿಂಗಳ ರಾಜಕೀಯ ಬಿಕ್ಕಟ್ಟಿಗೆ ಇದೀಗ ತೆರೆಬಿದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ