ಹಂದ್ವಾರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ (ಸಂಗ್ರಹ ಚಿತ್ರ) 
ದೇಶ

ಉಗ್ರರೊಂದಿಗೆ ಗುಂಡಿನ ಕಾಳಗ: ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಬುಧವಾರ ಬೆಳಗ್ಗೆ ಓರ್ವ ಭಾರತೀಯ ಯೋಧನನ್ನು ಹತ್ಯೆಗೈದಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಬುಧವಾರ ಬೆಳಗ್ಗೆ ಓರ್ವ ಭಾರತೀಯ ಯೋಧನನ್ನು ಹತ್ಯೆಗೈದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಯೋಧರು ದಿಢೀರ್ ಕಾರ್ಯಾಚರಣೆ ನಡೆಸಿ, ಉಗ್ರರ ಮೇಲೆ ದಾಳಿ  ಮಾಡಿದರು. ಈ ವೇಳೆ ಉಗ್ರಗಾಮಿಗಳು ಹಾಗೂ ಯೋಧರ ನಡುವೆ ತೀವ್ರ ಗುಂಡಿನ ಕಾಳಗೆ ನಡೆದಿದ್ದು, ಘಟನೆಯಲ್ಲಿ ಓರ್ವ ಯೋಧ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕುಪ್ವಾರ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಭಾರತೀಯ ಯೋಧರು ಮಂಗಳವಾರ ತಡರಾತ್ರಿಯಿಂದಲೇ ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದರು.  ಅರಣ್ಯ ಪ್ರದೇಶದಲ್ಲಿ ಉಗ್ರ ಗಾಮಿಗಳ ಜಾಡನ್ನು ಹಿಡಿದ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾನೆ. ಕಾರ್ಯಚರಣೆ  ಮುಂದುವರೆದಿದ್ದು, ಈಗಾಗಲೇ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಉಗ್ರರ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಓರ್ವ  ಯೋಧನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮತ್ತಿಬ್ಬರು ಗಾಯಾಳು ಯೋಧರನ್ನು ಏರ್ ಲಿಫ್ಟ್ ಕಾರ್ಯಾಚರಣೆ ಮೂಲಕವಾಗಿ ಬಾದಾಮಿ ಬಾಗ್ ಕಂಟೋನ್ಮೆಂಟ್ ನಲ್ಲಿರುವ ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್