ನವದೆಹಲಿ: ಸುಪ್ರೀಂ ಕೋರ್ಟ್ ಗೆ ನಾಲ್ವರು ಹೊಸ ನ್ಯಾಯಾಧೀಶರನ್ನು ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಗೆ ನಾಲ್ವರು ಹೊಸ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಮನವಿ ಮಾಡಿ ಕೊಲಿಜಿಯಂ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ಕೇರಳ ಹೈಕೋರ್ಟ್ ನ ನ್ಯಾಯಾಧೀಶ ಅಶೋಕ್ ಭೂಷಣ್, ಮಧ್ಯ ಪ್ರದೇಶ ಹೈಕೋರ್ಟ್ ನ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್, ಮತ್ತು ಹಿರಿಯ ವಕೀಲ, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಲ್ ನಾಗೇಶ್ವರ್ ರಾವ್ ಅವರನ್ನು ನೇಮಕ ಮಾಡಲಾಗಿದೆ. ನಾಲ್ವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.