ಬೇಣಿ ಪ್ರಸಾದ್ ವರ್ಮಾ - ಮುಲಾಯಂ ಸಿಂಗ್ ಯಾದವ್
ಲಖನೌ: ಸುಮಾರು 9 ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ತೊರೆದಿರುವ ಮಾಜಿ ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮಾ ಅವರು ಶುಕ್ರವಾರ ಸಮಾಜವಾದಿ ಪಕ್ಷ(ಎಸ್ ಪಿ)ಕ್ಕೆ ಮರು ಸೇರ್ಪಡೆಯಾಗಿದ್ದಾರೆ.
ಇಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಬೇಣಿ ಪ್ರಸಾದ್ ವರ್ಮಾ ಅವರು ಎಸ್ ಪಿ ಸೇರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೇಣಿ, ಕಾಂಗ್ರೆಸ್ನಲ್ಲಿ ಉಸಿರುಕಟ್ಟುವ ಪರಿಸರ ಇರುವುದರಿಂದ ಮರಳಿ ಸಮಾಜವಾದಿ ಪಕ್ಷಕ್ಕೆ ಬರುತ್ತಿರುವುದಾಗಿ ತಿಳಿಸಿದರು,
ಹಲವು ವರ್ಷಗಳಿಂದ ಮುಲಾಯಂ ಸಿಂಗ್ ಯಾದವ್ ಅವರ ನಿಕಟವರ್ತಿಯಾಗಿದ್ದ ಬೇಣಿ ಪ್ರಸಾದ್ ವರ್ಮಾ ಅವರು 2007ರಲ್ಲಿ ಸಮಾಜವಾದಿ ಪಕ್ಷ ತ್ಯಜಿಸಿದ್ದರು. ನಂತರ ಕಾಂಗ್ರೆಸ್ ಸೇರಿದ್ದರು ಬೇಣಿ ಯುಪಿಎ ಸರ್ಕಾರದಲ್ಲಿ ಸಚಿವ ಸ್ಥಾನದ ಮರ್ಯಾದೆಯೂ ಲಭಿಸಿತ್ತು.
ಕಾಂಗ್ರೆಸ್ ಪಕ್ಷ ಸೇರಿದ ಬಳಿ ನಿರಂತರವಾಗಿ ಅವರು ಮುಲಾಯಂ ವಿರುದ್ಧ ದಾಳಿ ನಡೆಸಿದ್ದರು. ಮಂತ್ರಿಯಾಗಿ ಮಾಡಿದ ಸಾಧನೆಗಿಂತಲೂ, ಈ ಟೀಕೆಗಳೇ ಅವರನ್ನು ಸದಾ ಕಾಲ ಸುದ್ದಿಯ ಕೇಂದ್ರ ಬಿಂದುವನ್ನಾಗಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics