ಹಣ ಜಪ್ತಿ (ಸಂಗ್ರಹ ಚಿತ್ರ) 
ದೇಶ

570 ಕೋಟಿ ಹಣ ಜಪ್ತಿ, ದಾಖಲೆ ಸಿಕ್ಕ ಬಳಿಕ ಬಿಡುಗಡೆ

ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರಿದ್ದು, 3 ಕಂಟೇನರ್ ಗಳಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 570 ಕೋಟಿ ರು.ಹಣವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ...

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರಿದ್ದು, 3 ಕಂಟೇನರ್ ಗಳಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 570 ಕೋಟಿ  ರು.ಹಣವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಇದೇ ಮೇ 16 ಸೋಮವಾರದಂದು ತಮಿಳುನಾಡಿನಲ್ಲಿ ವಿಧಾನಸಭೆಗೆ ಮತದಾನ ನಡೆಯಲಿದ್ದು, ರಾಜ್ಯಾದ್ಯಂತ ಮತದಾರನ್ನು ಸೆಳೆಯುವ ಅಂತಿಮ ಹಂತದ ಕಸರತ್ತು ಜೋರಾಗಿದೆ. ಈ  ಹಿನ್ನಲೆಯಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು ಕಾಯುತ್ತಿರುವ ಚುನಾವಣಾಧಿಕಾರಿಗಳು ಇಂದು 3 ಕಂಟೇನರ್ ಗಳಲ್ಲಿ ಹಣ ಸಾಗಿಸುತ್ತಿರುವ ಕುರಿತು ಮಾಹಿತಿ ಬಂದ ಕೂಡಲೇ ಕಂಟೇನರ್  ಸಾಗಿಸುತ್ತಿದ್ದ ಟ್ರಕ್ ಗಳ ಮೇಲೆ ದಾಳಿ ಮಾಡಿದ್ದಾರೆ. ಹಣವನ್ನು ತಿರುಪೂರ್ ಮಾರ್ಗವಾಗಿ ಕೊಯಮತ್ತೂರಿನಿಂದ ಆಂಧ್ರದ ವಿಶಾಖಪಟ್ಟಣಕ್ಕೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿದು ಮಾರ್ಗ ಮಧ್ಯೆ ಅಧಿಕಾರಿಗಳು ಕಂಟೇನರ್ ಸಾಗಿಸುತ್ತಿದ್ದ ಟ್ರಕ್ ಗಳನ್ನು ತಡೆದು ಅದರಲ್ಲಿದ್ದ ಬರೊಬ್ಬರಿ 570 ಕೋಟಿ ರು.ಹಣವನ್ನು ಜಪ್ತಿ ಮಾಡಿದ್ದಾರೆ. ಆದರೆ ಕೆಲವೇ  ಹೊತ್ತಿನ ಬಳಿಕ ಹಣದ ಬಗ್ಗೆ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ಅದು ಮತದಾರರಿಗೆ ಹಂಚಲು ತಂದಿದ್ದ ಹಣವಲ್ಲ ಬದಲಿಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಬ್ಯಾಂಕ್ ಗೆ ಸೇರಿದ  ಹಣ ಎಂಬ ವಿಚಾರ ತಿಳಿದು ಹಣವನ್ನು ಮತ್ತೆ ಬ್ಯಾಂಕ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ: ಇಂದು ಬಹಿರಂಗ ಪ್ರಚಾರಕ್ಕೆ ತೆರೆ
ಮತ್ತೊಂದೆಡೆ ಮೇ 16ರಂದು ನಡೆಯುವ ವಿಧಾನಸಭೆ ಚುನಾವಣೆ ನಿಮಿತ್ತ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳುತ್ತಿದ್ದು, ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು  ಅಂತಿಮ ಹಂತದ ಕಸರತ್ತು ನಡೆಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ