ತರುಣ್ ಗೊಗೊಯ್ 
ದೇಶ

ಪಿವಿ ನರಸಿಂಹ ರಾವ್ ಅವರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಹಿಡಿತ ಇರಲಿಲ್ಲ: ತರುಣ್ ಗೊಗೊಯ್

ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಹಲವು ಸುಧಾರಣೆಗಳನ್ನು ಜಾರಿಗೆ ತಂದರಾದರೂ ಕಾಂಗ್ರೆಸ್ ಪಕ್ಷದ ಮೇಲೆ ಹಿಡಿತ ಹೊಂದಿರಲಿಲ್ಲ ಎಂದು ತರುಣ್ ಗೊಗೊಯ್ ಹೇಳಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಹಲವು ಸುಧಾರಣೆಗಳನ್ನು ಜಾರಿಗೆ ತಂದರಾದರೂ ಕಾಂಗ್ರೆಸ್ ಪಕ್ಷದ ಮೇಲೆ ಹಿಡಿತ ಹೊಂದಿರಲಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಹೇಳಿದ್ದಾರೆ.

ಕೇಂದ್ರದಲ್ಲಿ ತಾವು ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಸಂಭವಿಸಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬರೆದಿದ್ದ ಪತ್ರಕ್ಕೆ ಪಿವಿ ನರಸಿಂಹ ರಾವ್ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ತರುಣ್ ಗೊಗೊಯ್ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

1992 ರಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಅಂದಿನ ಪ್ರಧಾನಿ ನರಸಿಂಹ ರಾವ್ ನಿರ್ವಹಿಸಿದ್ದನ್ನು ತಮ್ಮ ಪುಸ್ತಕ ಟರ್ನ್ ಅರೌಂಡ್- ಲೀಡಿಂಗ್ ಅಸ್ಸಾಂ ಫ್ರಮ್ ದಿ ಫ್ರಂಟ್ ನಲ್ಲಿ ನೆನಪಿಸಿಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್, ಪಿವಿ ನರಸಿಂಹ ರಾವ್ ಅವರು ಹಲವು ಸುಧಾರಣೆಗಳನ್ನು ಜಾರಿಗೆ ತಂದಿದ್ದರು,  ಸಂಪುಟ ಸಹೋದ್ಯೋಗಿಗಳ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿರಲಿಲ್ಲ. ಆಹಾರ ಸಚಿವನಾಗಿದ್ದ ನಾನು ಹಲವು ನಿರ್ಧಾರಗಳನ್ನು ಸ್ವತಂತ್ರವಾಗಿ ಕೈಗೊಂಡಿದ್ದೆ, ಆದರೆ ಅವರಿಗೆ ಕಾಂಗ್ರೆಸ್ ಮೇಲೆ ಹಿಡಿತವಿರಲಿಲ್ಲ ಎಂದು ಹೇಳಿದ್ದಾರೆ.
 
ತರುಣ್ ಗೊಗೊಯ್ ಅವರ ಪುಸ್ತಕ ಟರ್ನ್ ಅರೌಂಡ್- ಲೀಡಿಂಗ್ ಅಸ್ಸಾಂ ಫ್ರಮ್ ದಿ ಫ್ರಂಟ್ ಮೇ.14 ರಂದು ಬಿಡುಗಡೆಯಾಗಿದ್ದು, ಇದರಲ್ಲಿ ನರಸಿಂಹರಾವ್ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದು ಸೇರಿದಂತೆ ಅಂದಿನ ಪ್ರಮುಖ ಘಟನಾವಳಿಗಳ ಕುರಿತು ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT