ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ನಿವೃತ್ತ ಸಂಸದರಿಂದ ರಾಜ್ಯಗಳಿಗೆ ಆದ ನಷ್ಟವನ್ನು ನೆನಪಿಸಿದ ಪ್ರಧಾನಿ

ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತಿ ಹೊಂದುತ್ತಿರುವ 53 ಸದಸ್ಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನ ಮಂತ್ರಿ...

ನವದೆಹಲಿ: ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತಿ ಹೊಂದುತ್ತಿರುವ 53 ಸದಸ್ಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಾವು ಅಧಿಕಾರದಲ್ಲಿದ್ದಾಗ ಸರಕು ಮತ್ತು ಸೇವಾ ತೆರಿಗೆಗೆ ಅನುಮೋದನೆ ಸಿಗುತ್ತಿದ್ದರೆ ರಾಜ್ಯಗಳಿಗೆ ಉತ್ತಮವಾಗುತ್ತಿತ್ತು ಎಂದು ಹೇಳಲು ಮರೆಯಲಿಲ್ಲ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆಯಲು ಎನ್ ಡಿಎ ಹರಸಾಹಸ ಮಾಡುತ್ತಿದೆ. ನಿಮ್ಮ ಅಧಿಕಾರಾವಧಿಯಲ್ಲಿ ಎರಡು ಪ್ರಮುಖ ಮಸೂದೆಗಳಾದ ಸರಕು ಮತ್ತು ಸೇವಾ ತೆರಿಗೆ ಹಾಗೂ ಪರಿಹಾರ ಅರಣ್ಯ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರದ ಮಸೂದೆಗೆ ಒಪ್ಪಿಗೆ ಸಿಗುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ನಿವೃತ್ತ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದರು.

ರಾಜ್ಯಸಭಾ ಸದಸ್ಯರು ರಾಜ್ಯಗಳ ಪ್ರತಿನಿಧಿಗಳಾಗಿರುತ್ತಾರೆ ಮತ್ತು ತಮ್ಮ ರಾಜ್ಯಗಳ ಹಿತಾಸಕ್ತಿ ಅವರಿಗೆ ಮುಖ್ಯವಾಗಿರುತ್ತದೆ ಎಂದರು. ಸರಕು ಮತ್ತು ಸೇವಾ ತೆರಿಗೆಗೆ ಲೋಕಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ರಾಜ್ಯಸಭೆಯಲ್ಲಿ ಬಾಕಿ ಉಳಿದಿದೆ. ರಾಜ್ಯಸಭೆಯಲ್ಲಿ ಎನ್ ಡಿಎಗೆ ಬಹುಮತವಿಲ್ಲ. ಇನ್ನು ಅರಣ್ಯ ನಿಧಿ ನಿರ್ವಹಣೆ ಮಸೂದೆ ಅಂಗೀಕಾರವಾಗುತ್ತಿದ್ದರೆ ರಾಜ್ಯಗಳಿಗೆ 42 ಸಾವಿರ ಕೋಟಿ, ಪ್ರತಿ ರಾಜ್ಯಗಳಿಗೆ 2ರಿಂದ 3 ಸಾವಿರ ಕೋಟಿ ರೂಪಾಯಿ ಅನುದಾನ ಸಿಗುತ್ತಿತ್ತು. ಮುಂಗಾರಿಗೆ ಮುನ್ನ ರಾಜ್ಯಗಳಿಗೆ ಹಣ ಸಿಗುತ್ತಿದ್ದರೆ ಉಪಯೋಗವಾಗುತ್ತಿತ್ತು ಎಂದು ಪ್ರಧಾನಿ ಹೇಳಿದರು.

ಕಾಂಗ್ರೆಸ್ ನಾಯಕ ಆನಂದ ಶರ್ಮ ಮಾತನಾಡಿ, ರಾಜ್ಯಸಭೆಯಲ್ಲಿ ಪ್ರಮುಖ ಶಾಸನಗಳಾದ ಬಾಂಗ್ಲಾದೇಶ ಭೂ ಗಡಿಯನ್ನು ಒಪ್ಪಂದ, ವಿಮಾ ಮಸೂದೆ ಮತ್ತು ದಿವಾಳಿತನ ಮಸೂದೆಗಳಿಗೆ ಅಂಗೀಕಾರ ಸಿಕ್ಕಿವೆ. ಜಿಎಸ್ ಟಿ ಮಸೂದೆ ಅಂಗೀಕಾರವಾಗದಿರುವುದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ