ಚುನಾವಣಾ ಆಯೋಗ ವಶಪಸಿಕೊಂಡಿದ್ದ ಹಣ ತುಂಬಿದ ಟ್ರಕ್ ಗಳು 
ದೇಶ

ಜಪ್ತಿ ಮಾಡಿದ 570 ಕೋಟಿ ಹಣ ನಮ್ಮದು: ಎಸ್ ಬಿಐ ಸ್ಪಷ್ಟನೆ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ತಮಿಳುನಾಡಿನಲ್ಲಿ ಶನಿವಾರ ಚುನಾವಣಾ ಆಯೋಗ ಜಪ್ತಿ ಮಾಡಿದ್ದ 570 ಕೋಟಿ ಹಣ ನಮದೇ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಚೆನ್ನೈ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ತಮಿಳುನಾಡಿನಲ್ಲಿ ಶನಿವಾರ ಚುನಾವಣಾ ಆಯೋಗ ಜಪ್ತಿ ಮಾಡಿದ್ದ 570 ಕೋಟಿ ಹಣ ನಮದೇ  ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಚುನಾವಣಾ ಆಯೋಗ ಜಪ್ತಿ ಮಾಡಿದ್ದ ಹಣ ವಿಚಾರವಾಗಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್ ಬಿಐ ಅಧಿಕಾರಿಗಳು, "ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ಮೇರೆಗೆ  ಹಣವನ್ನು ಕೊಯಮತ್ತೂರಿನ ಮುಖ್ಯ ಕಚೇರಿಯಿಂದ ವಿಶಾಖಪಟ್ಟಣದ ಇನ್ನೊಂದು ಶಾಖೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಹಣವನ್ನು ಜಪ್ತಿ ಮಾಡಿದ್ದು ಚುನಾವಣಾ ಆಯೋಗದ  ತಪ್ಪು. ಆಂಧ್ರಪ್ರದೇಶದಲ್ಲಿನ ತಾತ್ಕಾಲಿಕ ನಗದು ಕೊರತೆಯನ್ನು ನೀಗಿಸಲು ಕೊಯಮತ್ತೂರಿನ ನಮ್ಮ ಮುಖ್ಯ ಕಚೇರಿಯಿಂದ ವಿಶಾಖಪಟ್ಟಣದ ವಿಶೇಷ ಆಡಳಿತ ಶಾಖೆಗೆ ಒಯ್ಯಲಾಗುತ್ತಿತ್ತು  ಎಂದು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿರುವ ತಮಿಳುನಾಡಿನಲ್ಲಿ ಶನಿವಾರ ಚುನಾವಣಾ ಅಧಿಕಾರಿಗಳು 3 ಟ್ರಕ್ ಗಳಲ್ಲಿ ಸಾಗಿಸಲಾಗುತ್ತಿದ್ದ ಬರೊಬ್ಬರಿ 570 ಕೋಟಿ ಹಣವನ್ನು ಜಪ್ತಿ ಮಾಡಿದ್ದರು. ಈ  ಹಣವನ್ನು ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಹೇಳಲಾಗುತ್ತಿತ್ತಾದರೂ, ಎಸ್ ಬಿಐ ಬ್ಯಾಂಕ್ ಅಧಿಕಾರಿಗಳು ಸೂಕ್ತ ದಾಖಲೆ ನೀಡಿದ ಹಿನ್ನಲೆಯಲ್ಲಿ ಇಂದು  ಹಣವನ್ನು ವಾಪಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ