ಜಿಂದ್: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಗನ್ ವಾಲಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಪಕ್ಷದಲ್ಲಿರುವ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದ ಯುವಕ ಆಕೆಯ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಕಿರುಚಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ರಸ್ತೆಯಲ್ಲಿ ಹೋಗುತ್ತಿದ್ದವರು ಆ ಪ್ರದೇಶಕ್ಕೆ ಬರುತ್ತಿರಬೇಕಾದರೆ ಆರೋಪಿ ಪರಾರಿಯಾಗಿದ್ದಾನೆ.
ತದ ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತನಿಖೆ ನಡಿಸಿದ ಪೊಲೀಸರು ಅತ್ಯಾಚಾರಕ್ಕೆ ಯತ್ನಿಸಿದ ಕೃಷ್ಣ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.