ಮನೋರಮಾ ದೇವಿ 
ದೇಶ

ತಲೆ ಮರೆಸಿಕೊಂಡಿದ್ದ ಜೆಡಿಯು ಎಂಎಲ್ ಸಿ ಶರಣಾಗತಿ: 14 ದಿನ ನ್ಯಾಯಾಂಗ ಬಂಧನ

ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗಯಾ: ಕಾರ್ ಓವರ್​ಟೇಕ್ ಪ್ರಕರಣದಲ್ಲಿ 19 ವರ್ಷದ ಯುವಕನ್ನು ಗುಂಡಿಟ್ಟು ಕೊಲೆಗೈದ ಮನೋರಮಾ ದೇವಿ ಪುತ್ರ ರಾಕಿ ಯಾದವ್​ನನ್ನು ಶೋಧಿಸುವ ಸಂದರ್ಭ ಪುರಿ ಬಡಾವಣೆಯಲ್ಲಿರುವ ಮನೆಯಲ್ಲಿ ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೇ 10ರಂದು ರಾಕಿಯಾದವ್ ತನ್ನ ಎಸ್​ಯುವಿ ಕಾರನ್ನು 19 ವರ್ಷದ ಆದಿತ್ಯ ಸಚ್ದೇವ್ ಓವರ್​ಟೇಕ್ ಮಾಡಿದ ಎಂಬ ಕಾರಣಕ್ಕಾಗಿ ಗುಂಡಿಟ್ಟು ಕೊಲೆಗೈದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಮನೋರಮ ದೇವಿ ಅವರ ಮನೆಯಯನ್ನು ಪೊಲೀಸರು ಪರಿಶೀಲಿಸುವ ವೇಳೆ ಕಾನೂನು ಬಾಹಿರವಾಗಿ ಮನೆಯಲ್ಲಿ ತಯಾರಿಸಿದ ಮದ್ಯ ಸಿಕ್ಕಿತ್ತು.
ಈ  ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಜೆಡಿಯು ಉಚ್ಚಾಟಿತ ಶಾಸಕಿ ಮನೋರಮಾ ದೇವಿ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಮಾತನಾಡಿದ ಮನೋರಮಾ ದೇವಿ, ‘ಪ್ರಕರಣದ ಕುರಿತು ನನಗೆ ಭಯವಿಲ್ಲ. ನನ್ನ ಮನೆಯಲ್ಲಿ ಯಾವುದೇ ರೀತಿಯ ಮದ್ಯ ತಯಾರಿಸಲಾಗಿಲ್ಲ. ಇದು ರಾಜಕೀಯ ಷಡ್ಯಂತ್ರ’ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video