ಜಿಯಾ ಖಾನ್ 
ದೇಶ

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿ: ಸುಪ್ರೀಂ ಕೋರ್ಟ್

ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಬಾಂಬೆ...

ನವದೆಹಲಿ: ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಬಾಂಬೆ ಹೈಕೋರ್ಟ್ ಗೆ ಆದೇಶಿಸಿದೆ.
ಹೈಕೋರ್ಟ್ ಸರ್ಕಾರಿ ವಿಶೇಷ ಅಭಿಯೋಜಕರ ಅನುಪಸ್ಥಿತಿಯಲ್ಲಿ ಪ್ರಕರಣ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಜಿಯಾ ಖಾನ್ ಅವರ ತಾಯಿ ರಬಿಯಾ ಅಮಿನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣದ ಕುರಿತು ಸಿಬಿಐ ನಡೆಸುತ್ತಿರುವ ಮಂದಗತಿಯ ತನಿಖೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಪ್ರಕರಣವನ್ನು ವಹಿಸಿಕೊಂಡು ಎರಡು ವರ್ಷಗಳೇ ಕಳೆದಿದೆ. ಆದರೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ ಕೋರ್ಟ್​ಗೆ ನೀಡಲು ವಿಫಲವಾಗಿರುವುದು ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಸಿಬಿಐಗೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಂತೆ ಹೈಕೋರ್ಟ್ ಗೆ ಸೂಚಿಸಿದೆ.
2014ರಲ್ಲೇ ಈ ಪ್ರಕರಣವನ್ನು ಬಾಂಬೆ ಹೈಕೋರ್ಟ್ ವಿಶೇಷ ತನಿಖಾದಳಕ್ಕೆ ವಹಿಸಿತ್ತು. ಜಿಯಾ ಅವರ ತಾಯಿ ರಬಿಯಾ ಅಮಿನ್ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದು, ಪ್ರಕರಣದಲ್ಲಿ ಜಿಯಾ ಖಾನ್ ಸ್ನೇಹಿತ ಸೂರಜ್ ಪಂಚೋಲಿ ಪಾತ್ರದ ಕುರಿತು ಶಂಕಿಸಿದ್ದ ನ್ಯಾಯಾಲಯ 20 ದಿನಗಳ ಬಂಧನ ವಿಧಿಸಿತ್ತು.
ಗಜನಿ, ಹೌಸ್​ಫುಲ್ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳಲಲ್ಲಿ ಅಭಿನಯಿಸಿದ್ದ ಜಿಯಾ ಖಾನ್ ಜೂನ್ 3, 2013ರಂದು ಮುಂಬೈಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!