ಹೈದರಾಬಾದ್: ತೆಲಂಗಾಣದಲ್ಲಿ ಈ ವರ್ಷ ಬೇಸಿಗೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 309 ಮಂದಿ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣೆ ಇಲಾಖೆ ಬುಧವಾರ ತಿಳಿಸಿದೆ.
ರಾಜ್ಯದಲ್ಲಿ ಈ ವರ್ಷ ಬಿಸಿಲಿನಿಂದ ಸಾವನ್ನಪ್ಪಿದವರ ಕುರಿತು ವರದಿ ನೀಡಲು ರಾಜ್ಯ ಸರ್ಕಾರ ಮೂವರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ರಚಿಸಿತ್ತು. ಆ ಸಮಿತಿ ಈಗ ವರದಿ ನೀಡಿದ್ದು, ನೆಲಗೊಂಡ ಜಿಲ್ಲೆಯಲ್ಲಿ ಅತಿ ಹೆಚ್ಚು(90 ಮಂದಿ ಸಾವು) ಜನ ಮೃತಪಟ್ಟಿದ್ದರೆ, ಮೆಹಬೂಬನಗರದಲ್ಲಿ 44 ಹಾಗೂ ಕಮ್ಮಮ್ ಜಿಲ್ಲೆಯಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣೆ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಈ ವರ್ಷ ತೆಲಂಗಾಣದಲ್ಲಿ ಬಿಸಿಲು ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುನ್ನಚ್ಚಿರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಅಲ್ಲದೆ ಬಿಸಿಲಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics