ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ: ದಿಗ್ವಿಜಯ್ ಸಿಂಗ್

ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ವಾದ್ರಾರವರು ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ, ಆದರೆ...

ಹೈದರಾಬಾದ್: ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿ ವಾದ್ರಾರವರು ಸಕ್ರಿಯ ರಾಜಕಾರಣ ಪ್ರವೇಶಿಸಲು ಬಯಸುತ್ತದೆ, ಆದರೆ ಅವರ ಕುಟುಂಬದವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿಯವರಿಗೆ ಸಾಮೂಹಿಕ ಜನನಾಯಕಿಯಾಗಿ ಹೊರಹೊಮ್ಮುವ ಸಾಮರ್ಥ್ಯವಿದೆ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಮುಖ್ಯ ಪಾತ್ರ ವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಅವರು, ಅದು ಕುಟುಂಬದ ನಿರ್ಧಾರಕ್ಕೆ ಬಿಟ್ಟ ವಿಷಯ. ಅವರು ಸಕ್ರಿಯ ರಾಜಕಾರಣಕ್ಕೆ ಬಂದರೆ ನಮಗೆ ಸಂತೋಷವೇ ಎಂದು ಹೇಳಿದರು.

ನೆಹರೂ-ಗಾಂಧಿ ಮನೆತನದ ಆಡಳಿತ ಕೇಂದ್ರವಾಗಿರುವ ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳು ಸೇರಿದಂತೆ ಬೇರೆ ಕ್ಷೇತ್ರಗಳಲ್ಲಿಯೂ ಪ್ರಿಯಾಂಕಾ ಅವರು ಚುನಾವಣಾ ಪ್ರಚಾರ ನಡೆಸುತ್ತಾರೆಯೇ ಎಂಬುದಕ್ಕೆ ಉತ್ತರಿಸಿದ ಸಿಂಗ್, ಆ ನಿರ್ಧಾರ ಪ್ರಿಯಾಂಕಾ ಮತ್ತು ಅವರ ಕುಟುಂಬದವರಿಗೆ ಬಿಟ್ಟದ್ದು ಎಂದರು.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರಷ್ಟೇ ಸಾಮರ್ಥ್ಯ ಅವರ ಮೊಮ್ಮಗಳಾದ ಪ್ರಿಯಾಂಕಾರವರಿಗೆ ಇದೆಯೇ ಎಂದು ಕೇಳಿದ್ದಕ್ಕೆ, ಇಂದಿರಾ ಗಾಂಧಿಯವರ ಸ್ಪಷ್ಟ ಹೋಲಿಕೆ ಪ್ರಿಯಾಂಕಾರವರಲ್ಲಿದೆ. ಆದರೆ ಅವರಷ್ಟೇ ಸಾಮರ್ಥ್ಯ ಇದೆಯೇ ಎಂಬ ಬಗ್ಗೆ ಈ ಕ್ಷಣದಲ್ಲಿ ಉತ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ವಿಳಂಬವಾಗುತ್ತಿರುವುದು ಪಕ್ಷದ ಭವಿಷ್ಯಕ್ಕೆ ತೊಂದರೆಯಾಗುತ್ತಿದೆಯೇ ಎಂದು ಕೇಳಿದಾಗ, ಇಲ್ಲ, ಇದು ಸೋನಿಯಾ ಗಾಂಧಿಯವರು ತೆಗೆದುಕೊಂಡ ನಿರ್ಧಾರ, ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಇತ್ತೀಚೆಗೆ ನಡೆದ 4 ರಾಜ್ಯಗಳ ವಿಧಾನಸಭೆ ಚುನಾವಣಾ ಸಮೀಕ್ಷೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.ನಾನು ಈ ಚುನಾವಣೋತ್ತರ ಸಮೀಕ್ಷೆಯನ್ನು ನಂಬುವುದಿಲ್ಲ. ಅದು ಕೇವಲ ಕಾಲ್ಪನಿಕ ಎಂದು ಹೇಳಿದರು.

ನರೇಂದ್ರ ಮೋದಿ ಸರ್ಕಾರದ 2 ವರ್ಷಗಳ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಿದ ಅವರು, ಭಾರೀ ಪ್ರಚಾರ ಪಡೆದಿದೆಯಷ್ಟೇ ಹೊರತು ಸಾಧನೆ ಬಹಳ ಕಡಿಮೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!