ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಆರಂಭಿಕ ಹಿನ್ನಡೆ ಅನುಭವಿಸಿದ್ದ ಸಿಎಂ ಜಯಯಲಿತಾ ಅವರ ನೇತೃತ್ವದ ಎಐಎಡಿಎಂಕೆ ಪಕ್ಷ ಇದೀಗ ಕರುಣಾನಿಧಿ ನೇತೃತ್ವದ ಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ.
ಒಟ್ಟು 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ ಪಕ್ಷ 115 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಡಿಎಂಕೆ ಪಕ್ಷ 80 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
ಇನ್ನು ಪಶ್ಚಿಮ ಬಂಗಳಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತಾ ರೂಢ ಟಿಎಂಸಿ ಮುನ್ನಡೆ ಪಡೆದಿದೆ. ಒಟ್ಟು 294 ಕ್ಷೇತ್ರಗಳ ಪೈಕಿ ಈಗಾಗಲೇ ತೃಣಮೂಲ ಕಾಂಗ್ರೆಸ್ ಪಕ್ಷ 204 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಸಿಪಿಎಂ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಪ್ರಸ್ತುತ 2 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
ಕೇರಳದಲ್ಲಿ ಎಲ್ ಡಿಎಫ್ 88 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಯುಡಿಎಫ್ 48 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಅಸ್ಸಾಂನಲ್ಲಿ ಬಿಜೆಪಿ ಪಕ್ಷ 62 ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.